ಕರ್ನಾಟಕ

karnataka

ETV Bharat / state

ಮನೆ ಬೀಗ ಮುರಿದು ಚಿನ್ನಾಭರಣ ದೋಚಿ ಕಳ್ಳರು ಎಸ್ಕೇಪ್ - Thieves escape news

ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು ಬೀರುವಿನಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ದೊಡ್ಡಬಳ್ಳಾಪುರದ ಬಸವೇಶ್ವರ ನಗರದಲ್ಲಿ ನಡೆದಿದೆ.

ಕಳ್ಳತನ
ಕಳ್ಳತನ

By

Published : Sep 3, 2020, 10:10 AM IST

ದೊಡ್ಡಬಳ್ಳಾಪುರ: ಮನೆಗೆ ಬೀಗ ಹಾಕಿ ಸಂಬಂಧಿಕರ ಮನೆಗೆ ಹೋಗಿದ್ದ ಸಮಯದಲ್ಲಿ ಬೀಗ ಮುರಿದು ಒಳ ನುಗ್ಗಿದ ಕಳ್ಳರು ಬೀರುವಿನಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.

ದೊಡ್ಡಬಳ್ಳಾಪುರದ ಬಸವೇಶ್ವರ ನಗರದ ರಾಜಣ್ಣನವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಮನೆಗೆ ಬೀಗ ಹಾಕಿ ತಮ್ಮ ಸ್ವಂತ ಊರಾದ ನೆಲಮಂಗಲ ತಾಲೂಕಿನ ಗೋರಘಟ್ಟಕ್ಕೆ ಹೋಗಿದ್ರು. ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು ಬೀರುವಿನಲ್ಲಿದ್ದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಸುಮಾರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದ್ದು, ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details