ಕರ್ನಾಟಕ

karnataka

ETV Bharat / state

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮೂವರು ಮಹಿಳೆಯರಿಗೆ ಕೊರೊನಾ ದೃಢ - Three Corona case

ಮೂವರು ಮಹಿಳೆಯರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಎಲ್ಲರೂ ಸೋಂಕಿತ ವ್ಯಕ್ತಿಯ ಪ್ರಥಮ ಸಂಪರ್ಕ ಹೊಂದಿದ್ದವರಾಗಿದ್ದಾರೆ. ಸೋಂಕಿತ ವ್ಯಕ್ತಿಗಳು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Three Corona case found  in Bangalore Rural District
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮೂವರು ಮಹಿಳೆಯರಿಗೆ ಕೊರೊನಾ ದೃಢ

By

Published : Jun 3, 2020, 6:38 AM IST

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂವರು ಮಹಿಳೆಯರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಎಲ್ಲರೂ ಸೋಂಕಿತ ವ್ಯಕ್ತಿಗಳ ಪ್ರಥಮ ಸಂಪರ್ಕ ಹೊಂದಿದ್ದವರಾಗಿದ್ದಾರೆ.

ಹೊಸಕೋಟೆ ತಾಲೂಕಿನ ಚಿಕ್ಕಕೊರಟ್ಟಿ ಗ್ರಾಮದ ನಿವಾಸಿಯಾದ (ಪಿ-3462) 36 ವರ್ಷದ ಮಹಿಳೆ, (ಪಿ-1724) ವ್ಯಕ್ತಿಯ ಸಂಪರ್ಕ ಹೊಂದಿದ್ದ ಹಿನ್ನೆಲೆ, ಆರೋಗ್ಯ ತಪಾಸಣೆ ಮಾಡಿಸಿದಾಗ ಸೋಂಕು ದೃಢಪಟ್ಟಿದೆ. ದೇವನಹಳ್ಳಿ ತಾಲೂಕಿನ ಕುಂದಾಣ ಹೋಬಳಿಯ ಇಲ್ತೊರೆ ಗ್ರಾಮದ 29 ವರ್ಷ (ಪಿ-3463) ಮತ್ತು 58 ವರ್ಷದ (ಪಿ-3464) ಮಹಿಳೆಯರಲ್ಲಿ ಸೋಂಕು ಪತ್ತೆಯಾಗಿದ್ದು, (ಪಿ-2550) ರ ಸಂಪರ್ಕ ಹೊಂದಿದ್ದವರಾಗಿದ್ದಾರೆ.

ಸೋಂಕಿತ ವ್ಯಕ್ತಿಗಳು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.

ABOUT THE AUTHOR

...view details