ದೊಡ್ಡಬಳ್ಳಾಪುರ: ಗೌರಿಬಿದನೂರು ಮತ್ತು ಚಿಕ್ಕಬಳ್ಳಾಪುರ ಗಡಿ ಭಾಗಕ್ಕೆ ಹೊಂದಿಕೊಂಡಿರುವ ತೂಬಗೆರೆ ಹೋಬಳಿಗೆ ಕೋವಿಡ್-19 ವೈರಸ್ ಹರಡುವ ಸಾಧ್ಯತೆಗಳು ಹೆಚ್ಚಾಗಿದ್ದು, ಜನರು ಆತಂಕದಲ್ಲಿದ್ದಾರೆ.
ತೂಬಗೆರೆಗೆ ಭೇಟಿ ನೀಡಿದ್ದ ಶಾಸಕ ನಿಸರ್ಗ ನಾರಾಯಣಸ್ವಾಮಿ, ಸಾರ್ವಜನಿಕರು ತಮಗೆ ತಾವೇ ಲಾಕ್ಡೌನ್ ಹಾಕಿಕೊಳ್ಳಬೇಕಾದ ಅನಿವಾರ್ಯತೆ ಇದೆ ಎಂದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿದ್ದು, ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿ ಚಿಕ್ಕಬಳ್ಳಾಪುರ ಮತ್ತು ಗೌರಿಬಿದನೂರು ಗಡಿ ಭಾಗಕ್ಕೆ ಹೊಂದಿಕೊಂಡಿದೆ. ಇದೇ ಕಾರಣಕ್ಕೆ ಇಲ್ಲಿನ ಜನರಲ್ಲಿ ಭೀತಿ ಉಂಟಾಗಿದೆ.
ಸ್ಥಳೀಯ ಶಾಸಕ ನಿಸರ್ಗ ನಾರಾಯಣಸ್ವಾಮಿ, ತಹಶೀಲ್ದಾರ್ ಶಿವರಾಜ್ ಭೇಟಿ ನೀಡಿ ಜನರಲ್ಲಿ ಜಾಗೃತಿ ಮೂಡಿಸಿದರು.