ಬೆಂಗಳೂರು: ಟಿಪ್ಪು ಜನ್ಮಸ್ಥಳ ದೇವನಹಳ್ಳಿ ಪಟ್ಟಣದಲ್ಲಿ ಸಂಭ್ರಮದಿಂದ ಟಿಪ್ಪು ಜಯಂತಿ ಆಚರಣೆ ಮಾಡಲಾಯಿತು. ಟಿಪ್ಪು ಪುತ್ಥಳಿಯನ್ನು ಹೂಮಾಲೆಗಳಿಂದ ಸಿಂಗಾರಗೊಳಿಸಲಾಗಿತ್ತು.
ಟಿಪ್ಪು ಜನ್ಮಸ್ಥಳದಲ್ಲಿ ಅದ್ದೂರಿ ಜಯಂತಿ ಆಚರಣೆ: ಸರ್ಕಾರದ ವಿರುದ್ದ ಹರಿಹಾಯ್ದ ವಾಟಾಳ್ - tippu jayanthi celebration in devanahalli
ದೇವನಹಳ್ಳಿಯಲ್ಲಿ ಅದ್ದೂರಿಯಾಗಿ ಟಿಪ್ಪು ಜಯಂತಿ ಆಚರಣೆ ಮಾಡಲಾಯಿತು. ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಜಯಂತಿಗೆ ಚಾಲನೆ ನೀಡಿ, ಟಿಪ್ಪು ಇತಿಹಾಸವನ್ನು ಪಠ್ಯಪುಸ್ತಕದಿಂದ ತೆಗೆಯುವ ಸರ್ಕಾರದ ನಿರ್ಧಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು.
ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಜಯಂತಿಗೆ ಚಾಲನೆ ನೀಡಿ ಮಾತನಾಡುತ್ತಾ, ಟಿಪ್ಪು ಇತಿಹಾಸವನ್ನು ಪಠ್ಯಪುಸ್ತಕದಿಂದ ತೆಗೆದರೆ ನಿಮ್ಮ ಸರ್ಕಾರ ಪತನ ಖಂಡಿತ. ಸರ್ಕಾರ ಉರುಳಿಸಲು ನಾನೇ ರಾಜ್ಯಾದ್ಯಂತ ಹೋರಾಟ ಮಾಡ್ತೀನಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಎಚ್ಚರಿಕೆ ನೀಡಿದರು.
ಶಾಸಕ ನಿಸರ್ಗ ನಾರಾಯಣಸ್ವಾಮಿ, ಟಿಪ್ಪು ವಂಶಸ್ಥರು ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮುಂದಿನ ದಿನಗಳಲ್ಲಿ ಟಿಪ್ಪು ಜಯಂತಿಯನ್ನು ಸರ್ಕಾರ ಆಚರಣೆ ಮಾಡಬೇಕು ಎಂದು ಅವರು ಆಗ್ರಹಿಸಿದರು. ಸ್ಥಳದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿತ್ತು.