ದೊಡ್ಡಬಳ್ಳಾಪುರ :ವ್ಯಕ್ತಿಯೊಬ್ಬ ಬ್ಯಾಂಕ್ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆಗೆ ಯತ್ನಿಸಿ ಗ್ರಾಮಸ್ಥರ ಕೈಯಲ್ಲಿ ಒದೆ ತಿಂದಿರುವ ಘಟನೆ ತಾಲೂಕಿನ ತೂಬಗೆರೆ ಗ್ರಾಮದಲ್ಲಿ ನಡೆದಿದೆ.
ಮಚ್ಚಿನಿಂದ ಬ್ಯಾಂಕ್ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನ! - attack on bank employee from sword,
ದುಷ್ಕರ್ಮಿಯೊಬ್ಬ ಬ್ಯಾಂಕ್ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆಗೆ ಯತ್ನಿಸಿ ಗ್ರಾಮಸ್ಥರಿಂದ ಗೂಸಾ ತಿಂದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.
ಗ್ರಾಮದ ಕಾರ್ಪೊರೇಷನ್ ಬ್ಯಾಂಕ್ ಸಿಬ್ಬಂದಿ ಮೇಲೆ ದುರ್ಗೇನಹಳ್ಳಿ ಗ್ರಾಮದ ಕುಮಾರ್(32) ಮಚ್ಚಿನಿಂದ ದಾಳಿ ಮಾಡಲು ಯತ್ನಿಸಿದ್ದಾನೆ. ಅದರೆ ಬ್ಯಾಂಕ್ ಸಿಬ್ಬಂದಿ ತಪ್ಪಿಸಿಕೊಂಡಿದ್ದಾರೆ. ಹಲ್ಲೆಗೆ ಯತ್ನಿಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಹಲ್ಲೆಗೆ ಯತ್ನಿಸಿದ ವ್ಯಕ್ತಿಯನ್ನು ಗ್ರಾಮಸ್ಥರು ಹಿಡಿದಿದ್ದಾರೆ. ಬಳಿಕ ಗುಂಪಾಗಿ ಸೇರಿದ ಗ್ರಾಮಸ್ಥರು ಕುಮಾರ್ನನ್ನು ರಸ್ತೆಯಲ್ಲೇ ಅಟ್ಟಾಡಿಸಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಇನ್ನು ಕುಮಾರ್ ಬ್ಯಾಂಕ್ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿರುವುದಕ್ಕೆ ಕಾರಣ ತಿಳಿದು ಬಂದಿಲ್ಲ. ಸುದ್ದಿ ತಿಳಿಯುತ್ತಿದ್ದಂತೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
TAGGED:
ಬ್ಯಾಂಕ್ ಸಿಬ್ಬಂದಿ ಮೇಲೆ ದಾಳಿ,