ದೊಡ್ಡಬಳ್ಳಾಪುರ(ಬೆಂಗಳೂರು ಗ್ರಾಮಾಂತರ):ಓವರ್ ಟೇಕ್ ಮಾಡುವ ಭರದಲ್ಲಿ ಎದುರಿಗೆ ಬಂದ ಬಸ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಗ್ರಾಮದ ಬಳಿ ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ಯಲಹಂಕ ತಾಲೂಕಿನ ತಿಂಡ್ಲು ಗ್ರಾಮದ ಮಂಜುನಾಥ್ (24) ಹಾಗೂ ನಿಖಿಲ್ (19) ಮೃತರು.
ಓವರ್ ಟೇಕ್ ಭರದಲ್ಲಿ ಬಸ್ಗೆ ಬೈಕ್ ಡಿಕ್ಕಿ: ಇಬ್ಬರು ಸವಾರರು ಸ್ಥಳದಲ್ಲೇ ಸಾವು - ಬೈಕ್ ಸವಾರರು ಸ್ಥಳದಲ್ಲೇ ಸಾವು
ಓವರ್ ಟೇಕ್ ಮಾಡುವ ಭರದಲ್ಲಿ ಬಸ್ಗೆ ಬೈಕ್ ಡಿಕ್ಕಿ. ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು. ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಗ್ರಾಮದ ಬಳಿ ಘಟನೆ.
ಬಸ್ಗೆ ಬೈಕ್ ಡಿಕ್ಕಿ
ಇವರು ಬೈಕ್ನಲ್ಲಿ ಗೌರಿಬಿದನೂರು ಕಡೆಯಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದರು. ಮುಂದಿನ ವಾಹನವನ್ನ ಓವರ್ ಟೇಕ್ ಮಾಡುವ ಭರದಲ್ಲಿ ಎದುರಿಗೆ ಬಂದ ಖಾಸಗಿ ಬಸ್ಗೆ ಮುಖಾಮುಖಿ ಡಿಕ್ಕಿ ಹೊಡೆದಿದ್ದಾರೆ ಎಂದು ತಿಳಿದುಬಂದಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಕನಕಪುರ ಬಳಿ ಅಪಘಾತದಲ್ಲಿ ತಂದೆ ಮಗ ಸಾವು