ದೊಡ್ಡಬಳ್ಳಾಪುರ: ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ, ಡಿಕೆಶಿ ಮತ್ತು ದಲಿತ ನಾಯಕರ ಹೆಸರುಗಳು ಕೇಳಿಬರುತ್ತಿವೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಎಂ. ರೇವಣ್ಣ ಪ್ರತಿಕ್ರಿಯೆ ನೀಡಿದ್ದಾರೆ.
ನಗರದಲ್ಲಿ ಶಾಸಕ ಟಿ. ವೆಂಕಟರಮಣಯ್ಯ ನಡೆಸುತ್ತಿರುವ ಅನ್ನದಾಸೋಹ ಕಾರ್ಯಕ್ರಮ ವೀಕ್ಷಣೆ ನಡೆಸಿದ ನಂತರ ಮಾಧ್ಯಮದವರೊಂದಿಗೆಮಾತನಾಡಿದ ಅವರು, ಚುನಾವಣೆಗೆ ಇನ್ನೂ ಎರಡು ವರ್ಷ ಬಾಕಿ ಇದೆ, ಎಲೆಕ್ಷನ್ನಲ್ಲಿ ಗೆದ್ದು ಮ್ಯಾಜಿಕ್ ನಂಬರ್ ಪಡೆದ ಬಳಿಕವೇ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಾಗುವುದು ಎಂದರು.
ಮಾಜಿ ಸಚಿವ ಹೆಚ್.ಎಂ. ರೇವಣ್ಣ ಮಾತನಾಡಿದರು ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಮುಂದಿನ ಮುಖ್ಯಮಂತ್ರಿ ಚರ್ಚೆ ಈಗ ಅಪ್ರಸ್ತುತ. ಕೊರೊನಾ ಸಮಯದಲ್ಲಿ ಸಂಕಷ್ಟಕ್ಕೆ ತುತ್ತಾದ ಜನರ ಕಷ್ಟ ಆಲಿಸುವ ಕೆಲಸವನ್ನು ಕಾಂಗ್ರೆಸ್ನವರು ಮಾಡಬೇಕು. ಚುನಾವಣೆಗೆ ಇನ್ನೂ ಎರಡು ವರ್ಷ ಇದೆ ಎಂದು ತಿಳಿಸಿದರು.
ಡಿ ಕೆ ಶಿವಕುಮಾರ್ ಇತಿಶ್ರೀ ಹಾಡಿದ್ದಾರೆ: ಮುಂದಿನ ಮುಖ್ಯಮಂತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲಾ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಇತಿಶ್ರೀ ಹಾಡಿದ್ದಾರೆ. ಕೊರೊನಾ ಸಮಯದಲ್ಲಿ ಬಿಜೆಪಿ ಸರ್ಕಾರದ ನ್ಯೂನ್ಯತೆಗಳು ಮತ್ತು ಭ್ರಷ್ಟಾಚಾರದ ಬಗ್ಗೆ ಕಾರ್ಯಕ್ರಮ ಮಾಡಲಾಗುವುದು. ಇದು ಕಾಂಗ್ರೆಸ್ ಪಕ್ಷದ ಮುಂದಿರುವ ಪ್ರಸ್ತುತ ಕೆಲಸ ಎಂದು ರೇವಣ್ಣ ತಿಳಿಸಿದರು.
ಓದಿ:ನಾಳೆಯಿಂದ Online class.. ಗ್ರಾಮೀಣ ಭಾಗದಲ್ಲಿ ಶೇ.5ರಷ್ಟು ಮಕ್ಕಳ ದಾಖಲಾತಿಯಾಗಿಲ್ಲ ಎಂದ ರೂಪ್ಸಾ