ನೆಲಮಂಗಲ (ಬೆಂಗಳೂರು ಗ್ರಾಮಾಂತರ): ನೆಲಮಂಗಲ ತಾಲೂಕಿನ ಹೊನ್ನೇನಹಳ್ಳಿಯ ಕೆರೆಯಲ್ಲಿ ಸೂಟ್‌ಕೇಸ್‌ನಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ.
ನೆಲಮಂಗಲ: ಕೆರೆಗೆಸೆದ ಸೂಟ್‌ಕೇಸ್‌ನಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ - ಕೊಲೆ ಮಾಡಿ ಶವ ಕೆರೆಗೆ ಎಸೆದಿರುವ ಶಂಕೆ
ಮಹಿಳೆಯನ್ನು ದುಷ್ಕರ್ಮಿಗಳು ಬೇರೆಡೆ ಕೊಲೆ ಮಾಡಿ ಶವವನ್ನು ಸೂಟ್‌ಕೇಸ್‌ನಲ್ಲಿ ತುಂಬಿ ಕೆರೆಗೆ ಎಸೆದು ಪರಾರಿಯಾಗಿದ್ದಾರೆ.
ನೆಲಮಂಗಲ: ಕೆರೆಗೆ ಎಸೆದ ಸೂಟ್‌ಕೇಸ್‌ನಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ
ಸುಮಾರು 30ರಿಂದ 40 ವಯಸ್ಸಿನ ಮಹಿಳೆಯ ಶವವಾಗಿದ್ದು, ಯಾರೋ ದುಷ್ಕರ್ಮಿಗಳು ಬೇರೆಡೆ ಕೊಲೆ ಮಾಡಿ ಶವವನ್ನು ಸೂಟ್‌ಕೇಸ್‌ನಲ್ಲಿ ತುಂಬಿ ಕೆರೆಗೆ ಎಸೆದು ಪರಾರಿಯಾಗಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೋನಾವಂಶಿ ಕೃಷ್ಣ ಹಾಗೂ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ದಾಬಸ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ.
ಇದನ್ನೂ ಓದಿ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಸೋತ ಯುವಕ; ಹಣ ಮರಳಿಸಲಾಗದೆ ಆತ್ಮಹತ್ಯೆ ಯತ್ನ