ಕರ್ನಾಟಕ

karnataka

ETV Bharat / state

ಕೇಡರ್ ಬೇಸ್ ಮೇಲೆ ಕಾಂಗ್ರೆಸ್ ಪಕ್ಷ ಕಟ್ಟಲು ಕಾರ್ಯತಂತ್ರ: ಡಿಕೆ ಶಿವಕುಮಾರ್

ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ಬಗ್ಗೆ ಚರ್ಚೆ ನಡೆಸಲು ದೇವನಹಳ್ಳಿಯಲ್ಲಿ ರಾಜ್ಯ ಕಾಂಗ್ರೆಸ್ ಮುಖಂಡರ ಸಭೆ ನಡೆಸಲಾಯಿತು.

DK Shivakumar
ಡಿಕೆ ಶಿವಕುಮಾರ್

By

Published : Dec 1, 2020, 3:19 AM IST

ದೇವನಹಳ್ಳಿ: ರಾಜ್ಯ ಕಾಂಗ್ರೆಸ್ ಮುಖಂಡರ ಮಹತ್ವದ ಸಭೆ ದೇವನಹಳ್ಳಿ ತಾಲೂಕಿನ ಸಾದಹಳ್ಳಿ ಬಳಿಯ ಕ್ಲಾರ್ಕ್​ ಎಕ್ಸೋಟಿಕ ರೆಸಾರ್ಟ್​ನಲ್ಲಿ ನಡೆಯಿತು, ಪಕ್ಷದ ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚೆ ಮಾಡಲಾಗಿದ್ದು ಪಕ್ಷವನ್ನು ತಳಮಟ್ಟದಲ್ಲಿ ಕಟ್ಟಲು ಕೇಡರ್ ಬೇಸ್ ಮೇಲೆ ಪಕ್ಷ ಕಟ್ಟಲಾಗುವುದೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿಕುಮಾರ್​ ಹೇಳಿದ್ದಾರೆ.

ಉಪಚುನಾವಣೆಯಲ್ಲಿ ಸೋಲು ಮತ್ತು ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸುವ ಕಾರಣಕ್ಕೆ ರಾಜ್ಯ ಕಾಂಗ್ರೆಸ್ ಮುಖಂಡರ ಸಭೆ ನಡೆಸಲಾಯಿತು. ಈ ಬಗ್ಗೆ ಮಾಹಿತಿ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವುದಾಗಿ ಹೇಳಿದರು. ರಾಜ್ಯ ರಾಜಕಾರಣದಲ್ಲಿ ಏನಾಗುತ್ತಿದೆ ಎಂಬುದರ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಗ್ರಾಮ ಪಂಚಾಯತ್ ಚುನಾವಣೆ ನಡೆಸುವಂತೆ ಕಾಂಗ್ರೆಸ್, ಕೋರ್ಟ್​ ಮೊರೆ ಹೋಗಿತ್ತು. ಚುನಾವಣೆ ನಡೆಸುವಂತೆ ಕೋರ್ಟ್ ಆದೇಶ ನೀಡಿದ್ದು, ಕಾಂಗ್ರೆಸ್ ಪಕ್ಷ ಸ್ವಾಗತ ಕೋರುತ್ತದೆ ಎಂದರು.

ಡಿಕೆ ಶಿವಕುಮಾರ್

ಸಭೆಯಲ್ಲಿ ಕಾಂಗ್ರೆಸ್ ನಾಯಕರಾದ ಅಹ್ಮದ್ ಪಟೇಲ್ ಮತ್ತು ತರುಣ್ ಗೊಗೊಯ್ ರವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು. ಪ್ರಮುಖವಾಗಿ ಪಕ್ಷದ ಸಂಘಟನೆ ಬಗ್ಗೆ ಚರ್ಚೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಕೆಡರ್ ಬೇಸ್ ಮೇಲೆ ಕಾಂಗ್ರೆಸ್ ಪಕ್ಷ ಕಟ್ಟಲಾಗುತ್ತದೆ, ಪಂಚಾಯತ್ ಮತ್ತು ಬೂತ್ ಮಟ್ಟದಲ್ಲಿ ಸಮಿತಿ ರಚನೆ ಮಾಡಲಾಗುವುದು. ಸಮಿತಿಗೆ ಪ್ರಜಾ ಪ್ರತಿನಿಧಿ ಎಂಬ ಹೆಸರಿಡಲಾಗುತ್ತದೆ. ಎಲ್ಲಾ ವರ್ಗದ ಜನರು ಸಮಿತಿಯಲ್ಲಿ ಪ್ರತಿನಿಧಿಸಲು ಅವಕಾಶ ಕಲ್ಪಿಸಲಾಗುವಂತೆ ಕಾರ್ಯಕ್ರಮ ಮಾಡಲಾಗುತ್ತದೆ. ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪ್ರಜಾ ಪ್ರತಿನಿಧಿ ಅನುಷ್ಠಾನಕ್ಕೆ ತರುತ್ತೇವೆ. ನಮ್ಮ ಕಾರ್ಯಕರ್ತರು ಈ ಅವಕಾಶ ಬಳಸಿಕೊಳ್ಳಲು ಕಾರ್ಯಕ್ರಮ ರೂಪಿಸಲಾಗುತ್ತಿದೆ ಎಂದರು.

ಉಪಚುನಾವಣೆ ನಡೆದ ಆರ್​ ಆರ್​ ನಗರ ಮತ್ತು ಶಿರಾ ಕ್ಷೇತ್ರಗಳ ಸೋಲಿನ ಆತ್ಮಾವಲೊಕನ, ಆಡಳಿತ ಪಕ್ಷದ ದುರುಪಯೋಗ ಬಗ್ಗೆಯೂ ಚರ್ಚೆ ಮಾಡಲಾಗಿದೆ. ಮುಂದಿನ ಉಪಚುನಾವಣೆಯಲ್ಲಿ ಎಚ್ಚೆತ್ತುಕೊಂಡು ಕೆಲಸ ಮಾಡಲಾಗುವುದು. ಬೆಳಗಾವಿ, ಬಸವಕಲ್ಯಾಣ, ಮಸ್ಕಿ ಕ್ಷೇತ್ರಕ್ಕೆ ಸಮಿತಿ ರಚನೆ ಮಾಡಲಾಗುತ್ತದೆ. ಸಮಿತಿ ಶಿಫಾರಸ್ಸು ಆಧಾರಿಸಿ ದೆಹಲಿಗೆ ಪಟ್ಟಿ ಕಳಿಸಲಾಗುವುದು. ಸ್ಥಳೀಯರಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ, ಶೀಘ್ರದಲ್ಲೇ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ, ಕಣಕ್ಕೆ ಇಳಿಸುವ ಸೂಚನೆ ನೀಡಿದರು.

ಮುಂಬರುವ ಗ್ರಾಮ ಪಂಚಾಯತ್ ಚುನಾವಣೆಗೆ ರಾಜ್ಯದ ಎಲ್ಲಾ ಹಿರಿಯರು ಸೇರಿದಂತೆ 9 ನಾಯಕರ ಟೀಂ ರಚನೆ ಮಾಡಲಾಗುತ್ತದೆ. ಎಲ್ಲಾ ನಾಯಕರು ರಾಜ್ಯಾದ್ಯಂತ ಪ್ರವಾಸ ಮಾಡ ಬೇಕು. ಈ ಚುನಾವಣೆಯನಗನು ಯಶಸ್ವಿ ಗೊಳಿಸಲು ತಳಮಟ್ಟದಲ್ಲಿ ಪ್ರಯತ್ನ ನಡೆಯುತ್ತಿದ್ದು, ಸರ್ಕಾರದ ತಪ್ಪುಗಳನ್ನು ಜನರಿಗೆ ಮುಟ್ಟಿಸುವ ಪ್ರಯತ್ನ ಮಾಡಲಾಗುತ್ತಿದೆ. ಪಕ್ಷದ ಸಂಘಟನೆಗಾಗಿ ಹೊಸದಾಗಿ ಸಹಕಾರ, ಸಾಂಸ್ಕೃತಿಕ ಚಾಲಕರ ಸಮಿತಿ ರಚನೆ ಮಾಡಲಾಗುತ್ತದೆ. ಪಂಚಾಯತ್ ಮಟ್ಟದಿಂದ ರಾಜ್ಯ ಮಟ್ಟದವರೆಗೂ ಸಮಿತಿ ರಚನೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ABOUT THE AUTHOR

...view details