ದೇವನಹಳ್ಳಿ(ಬೆಂಗಳೂರು ಗ್ರಾಮಾಂತರ): ಸ್ಯಾನಿಟರಿ ಪ್ಯಾಡ್ನೊಳಗೆ ಬಚ್ಚಿಟ್ಟುಕೊಂಡು ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕರೊಬ್ಬರನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆರೋಪಿಯಿಂದ 15 ಲಕ್ಷ ಮೌಲ್ಯದ 302 ಗ್ರಾಂ ತೂಕದ ಚಿನ್ನ ವಶಪಡಿಸಿಕೊಳ್ಳಲಾಗಿದೆ.
ಶುಕ್ರವಾರ ಬ್ಯಾಂಕಾಕ್ನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮಹಿಳೆ ಬಂದಿದ್ದಳು. ಆಕೆಯ ಹಿನ್ನೆಲೆಯ ಬಗ್ಗೆ ಸಂಶಯಗೊಂಡ ವಾಯು ಗುಪ್ತಚರ ಘಟಕದ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಆಗ ಮಹಿಳೆಯು ಸ್ಯಾನಿಟರಿ ಪ್ಯಾಡ್ನಲ್ಲಿ 5 ಚಿನ್ನದ ತುಣುಕುಗಳನ್ನ ಬಚ್ಚಿಟ್ಟಿರುವುದು ಬೆಳಕಿಗೆ ಬಂದಿದೆ.