ದೊಡ್ಡಬಳ್ಳಾಪುರ: ಮರದ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ.
ದೊಡ್ಡಬಳ್ಳಾಪುರ ನಗರದ ವಲಯ ಅರಣ್ಯಾಧಿಕಾರಿಗಳ ಕಚೇರಿ ಮುಂದೆ ಈ ಅವಘಡ ಸಂಭವಿಸಿದ್ದು, 48 ವರ್ಷದ ಲಕ್ಷಮ್ಮ ಸಾವನ್ನಪ್ಪಿದ್ದಾರೆ. ಮೃತ ಮಹಿಳೆ ಕೋಲಾರ ಮೂಲದವರು ಎಂದು ತಿಳಿದುಬಂದಿದೆ.

ಇಂದು ಬೆಳಗ್ಗೆ ಅಂಗಡಿಯ ಬಾಗಿಲಿನ ಕಸ ಗುಡಿಸುತ್ತಿದ್ದಾಗ ಆಲದ ಮರದಿಂದ ಒಣಗಿದ ಕೊಂಬೆ ಮುರಿದು ಲಕ್ಷಮ್ಮ ಅವರ ತಲೆ ಹಿಂಭಾಗಕ್ಕೆ ಬಿದ್ದಿದೆ. ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಓದಿ:ಗೆಳತಿಯನ್ನು ಖುಷಿಪಡಿಸಲು ಐಪಿಎಸ್ ಎಂದು ಬಿಲ್ಡಪ್, ಭದ್ರತೆಗೆ ಬೇಡಿಕೆಯಿಟ್ಟು ಸಿಕ್ಕಿಬಿದ್ದ!