ಕರ್ನಾಟಕ

karnataka

ETV Bharat / state

ಡ್ರಾಪ್ ಕೊಡುವ ನೆಪದಲ್ಲಿ ಮಹಿಳೆಯನ್ನ ತೋಪಿಗೆ ಕರೆದೊಯ್ದು ರೇಪ್ ಮಾಡಿದ ಕಾಮುಕರು - woman rape in Hosakote

ನವೆಂಬರ್ 16ರಂದು ಸಂತ್ರಸ್ತೆಗೆ ಮೆಡಿಕಲ್ ಟೆಸ್ಟ್ ಮಾಡಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೇಸ್​ ದಾಖಲಾಗಿ 10 ದಿನ ಕಳೆದರೂ ಕ್ರಮ ಕೈಗೊಂಡಿಲ್ಲ ಅಂತಾ ಸಂತ್ರಸ್ತೆಯ ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ. ನ್ಯಾಯಕ್ಕಾಗಿ ಅವರು ಕಣ್ಣೀರು ಹಾಕಿದ್ದಾರೆ..

Hosakote Police Station
ಹೊಸಕೋಟೆ ಪೊಲೀಸ್ ಠಾಣೆ

By

Published : Nov 26, 2021, 5:33 PM IST

ಹೊಸಕೋಟೆ :ಡ್ರಾಪ್ ಕೊಡುವುದಾಗಿ ಹೇಳಿ ಬೈಕ್​ನಲ್ಲಿ ಕರೆದೊಯ್ದು ಇಬ್ಬರು ಅಪರಿಚಿತರು ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಹೊರವಲಯದಲ್ಲಿ ನಡೆದಿದೆ.

ಕಳೆದ 14ರ ಸಂಜೆ ವಾಕಿಂಗ್ ಹೋಗಿ ಮನೆಗೆ ವಾಪಸ್ಸಾಗುತ್ತಿದ್ದ ಮಹಿಳೆ(38)ಯನ್ನು ಮನೆ ಬಳಿ ಬಿಡೋದಾಗಿ ಆರೋಪಿಗಳು ನಂಬಿಸಿದ್ದಾರೆ. ನಂತರ ಬೈಕ್​ನಲ್ಲಿ ಕೂರಿಸಿಕೊಂಡು ಹೊಸಕೋಟೆ ಬಳಿಯ ನೀಲಗಿರಿ ತೋಪಿಗೆ ಕರೆದೊಯ್ದು ದುಷ್ಕೃತ್ಯ ಎಸಗಿದ್ದಾರೆ.

ಕೃತ್ಯದ ನಂತರ ಸಂತ್ರಸ್ತೆಯನ್ನು ನೀಲಗಿರಿ ತೋಪಿನಲ್ಲೇ ಬಿಟ್ಟು ಕಾಮುಕರು ಪರಾರಿಯಾಗಿದ್ದಾರೆ. ಸದ್ಯ ಸ್ಥಳೀಯರ ಸಹಾಯದಿಂದ ಮಹಿಳೆ ಮನೆಗೆ ವಾಪಸ್ ಬಂದಿದ್ದಾರೆ.

ಘಟನೆ ನಡೆದ ರಾತ್ರಿ ಹತ್ತು ಗಂಟೆಯಾದರೂ ಮಗಳು ಮನೆಗೆ ಬಾರದ ಕಾರಣ ನಾಪತ್ತೆಯಾಗಿರೋ ಬಗ್ಗೆ ಸಂತ್ರಸ್ತೆಯ ತಂದೆ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ನಂತರ ಮುಂಜಾನೆ ಮೂರು ಗಂಟೆಗೆ ಮಗಳು ಮನೆಗೆ ಬಂದಿದ್ದನ್ನು ಕಂಡು ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ.

ನವೆಂಬರ್ 16ರಂದು ಸಂತ್ರಸ್ತೆಗೆ ಮೆಡಿಕಲ್ ಟೆಸ್ಟ್ ಮಾಡಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೇಸ್​ ದಾಖಲಾಗಿ 10 ದಿನ ಕಳೆದರೂ ಕ್ರಮ ಕೈಗೊಂಡಿಲ್ಲ ಅಂತಾ ಸಂತ್ರಸ್ತೆಯ ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ. ನ್ಯಾಯಕ್ಕಾಗಿ ಅವರು ಕಣ್ಣೀರು ಹಾಕಿದ್ದಾರೆ.

ಓದಿ:ಹುಬ್ಬಳ್ಳಿ: ಮದ್ಯದ ಅಮಲಿನಲ್ಲಿದ್ದ ವ್ಯಕ್ತಿ ನೀರಿನ ಡ್ರಮ್‌ನಲ್ಲಿ ಮುಳುಗಿ ಸಾವು

ABOUT THE AUTHOR

...view details