ನೆಲಮಂಗಲ: ಹೆಂಡತಿ ಶೀಲದ ಬಗ್ಗೆ ಅನುಮಾನ ಪಡುತ್ತಿದ್ದ ಗಂಡನ ಮಾನಸಿಕ ಕಿರುಕುಳ ತಾಳಲಾರದೆ ಡೆತ್ ನೋಟ್ ಬರೆದು ಗೃಹಿಣಿವೋರ್ವಳು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ತಾಲೂಕಿನ ದಾಬಸ್ ಪೇಟೆಯಲ್ಲಿ ಘಟನೆ ನಡೆದಿದ್ದು, 35 ವರ್ಷದ ಮಹಿಳೆ ನೇಣಿಗೆ ಶರಣಾಗಿದ್ದಾಳೆ. ಮೃತ ಮಹಿಳೆಗೆ 18 ವರ್ಷಗಳ ಹಿಂದೆ ಗಂಗೇಗೌಡನಪಾಳ್ಯದ ಉಮೇಶ್ ಎಂಬುವರ ಜೊತೆ ಮದುವೆಯಾಗಿತ್ತು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.
ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ಉಮೇಶ್ ಹೆಂಡತಿಯ ಶೀಲದ ಬಗ್ಗೆ ಅನುಮಾನಪಡಲು ಪ್ರಾರಂಭಿಸಿದ. ಅಲ್ಲದೆ, ಮಾನಸಿಕವಾಗಿ ಕಿರುಕುಳ ಕೊಡುತ್ತಿದ್ದ. ಮನೆಗೆ ಬರದೆ ದಿನಸಿ ತಂದುಕೊಡದೆ ಹೆಂಡತಿಗೆ ಮಾನಸಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗ್ತಿದೆ. ಗಂಡನ ಕಿರುಕುಳ ತಾಳಲಾರದೆ ಪತ್ನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಇದನ್ನೂ ಓದಿ:ಪ್ರತ್ಯೇಕ ಆರು ಎಫ್ಐಆರ್: 12 ಲಕ್ಷ ರೂ. ಮೌಲ್ಯದ 1.497 ಕ್ವಿಂಟಾಲ್ ಪಡಿತರ ಅಕ್ಕಿ ಜಪ್ತಿ!
ಸಾಯುವ ಮುನ್ನ 3 ಪುಟಗಳ ಡೆತ್ ನೋಟ್ ಬರೆದಿದ್ದಾಳೆ. ಈ ಬಗ್ಗೆ ದಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.