ಕರ್ನಾಟಕ

karnataka

ETV Bharat / state

ಮಹಿಳೆ ಕೊಲೆಗೈದು ಚಿನ್ನಾಭರಣ ಕಳವು, ಬೆಚ್ಚಿಬಿದ್ದ ನೆಲಮಂಗಲ - Nalamangala Town Police Station

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಮಹಿಳೆಯನ್ನು ಹತ್ಯೆಗೈದು ಚಿನ್ನಾಭರಣ ದೋಚಿರುವ ಪ್ರಕರಣ ನಡೆದಿದೆ.

ಮಹಿಳೆ ಕೊಲೆಗೈದು ಚಿನ್ನಾಭರಣ ಕಳವು

By

Published : Oct 30, 2019, 8:00 PM IST

ಬೆಂಗಳೂರು : ಒಂಟಿ ಮಹಿಳೆಯ ಮನೆಗೆ ನುಗ್ಗಿದ ಹಂತಕನೊಬ್ಬ ಆಕೆಯ ಕೊರಳಿಗೆ ಮೊಬೈಲ್ ಚಾರ್ಜರ್ ವೈರ್​ನಿಂದ ಬಿಗಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ.

ಮಹಿಳೆ ಕೊಲೆಗೈದು ಚಿನ್ನಾಭರಣ ಕಳವು
ನೆಲಮಂಗಲ ಪಟ್ಟಣದ ಕಾವೇರಿ ಲೇಔಟ್‌ನಲ್ಲಿ ಘಟನೆ ನಡೆದಿದ್ದು, ಶಾರದಮ್ಮ (53) ಎಂಬ ಮಹಿಳೆ ಕೊಲೆಯಾಗಿದ್ದಾರೆ.
ಕೊಲೆ ಮಾಡಿದ ನಂತರ 200 ಗ್ರಾಂ ಚಿನ್ನಾಭರಣ ದೋಚಿ ಆರೋಪಿ ಪರಾರಿಯಾಗಿದ್ದಾನೆ. ಶಾರದಮ್ಮಳ ಗಂಡ ದಿನಸಿ ತರಲು ಮನೆಯಿಂದ ಹೊರ ಹೋಗಿದ್ದಾಗ ಈ ಕೃತ್ಯ ನಡೆದಿದೆ. ಕತ್ತಿನ ಭಾಗದಲ್ಲಿ ಮೊಬೈಲ್ ವೈರ್​ನಿಂದ ಬಿಗಿದಿರುವ ಗುರುತು ಪತ್ತೆಯಾಗಿದ್ದು ಮನೆಯ ಹಿಂಬಾಗಿಲು ತೆರೆದಿದೆ.
ಘಟನಾ ಸ್ಥಳಕ್ಕೆ ನೆಲಮಂಗಲ ಟೌನ್ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕೊಲೆ ಆರೋಪಿ ಪತ್ತೆಗೆ ಬಲೆ ಬೀಸಿದ್ದಾರೆ.

ABOUT THE AUTHOR

...view details