ನೆಲಮಂಗಲ (ಬೆಂಗಳೂರು ಗ್ರಾಮಾಂತರ) :ತಾಲೂಕಿನ ದಾಬಸ್ಪೇಟೆ ಕೈಗಾರಿಕಾ ಪ್ರದೇಶದಲ್ಲಿನ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡು ಓರ್ವ ಕಾರ್ಮಿಕ ಮೃತಪಟ್ಟ ಘಟನೆ ಇಂದು ಸಂಭವಿಸಿದೆ. ಘಟನೆಯಲ್ಲಿ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ.
ಖಾಸಗಿ ಕಂಪನಿಯಲ್ಲಿ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಬಾಯ್ಲರ್ ಸ್ಫೋಟಗೊಂಡು ಅವಘಡ ನಡೆದಿದೆ ಎಂದು ತಿಳಿದು ಬಂದಿದೆ. ತೀವ್ರ ಗಾಯಗೊಂಡ ಕಾರ್ಮಿಕ ಚಿಗಮಲ್ಲಪ್ಪ ಅಲಿಯಾಸ್ ಮಂಜಪ್ಪ (40) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನೋರ್ವ ಕಾರ್ಮಿಕ ಮನೋಜ್ಗೆ (29) ಗಂಭೀರ ಗಾಯಗಳಾಗಿದ್ದು, ಚಿಂತಾಜನಕ ಸ್ಥಿತಿಯಲ್ಲಿರುವ ಆತನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.