ದೊಡ್ಡಬಳ್ಳಾಪುರ (ಬೆಂ.ಗ್ರಾ): ಮೂರು ವರ್ಷಗಳಿಂದ ವೇತನ ಹೆಚ್ಚಳ ಮಾಡದ ಎಮ್ಐಸಿ ಕಾರ್ಖಾನೆ ಆಡಳಿತ ಮಂಡಳಿ ವಿರುದ್ಧ ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದು, ಆಡಳಿತ ಮಂಡಳಿ ಏಕಾಏಕಿ ಲಾಕ್ಔಟ್ ಮಾಡಿದೆ. ಫ್ಯಾಕ್ಟರಿಯೊಳಗೆ ಎರಡು ದಿನಗಳಿಂದ ಅನ್ನ ನೀರು ಬಿಟ್ಟು ಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಇನ್ಫ್ರಾ ಕಾರ್ಪೋರೇಶನ್ ಪ್ರೈವೇಟ್ ಲಿಮಿಟೆಡ್ (MIC) ಫ್ಯಾಕ್ಟರಿಯಲ್ಲಿ 400ಕ್ಕೂ ಹೆಚ್ಚು ಕಾರ್ಮಿಕರು ದುಡಿಯುತ್ತಿದ್ದಾರೆ, ಆದರೆ ಕಳೆದ ಮೂರು ವರ್ಷಗಳಿಂದ ವೇತನ ಹೆಚ್ಚಳ ಮಾಡಿಲ್ಲ ಮತ್ತು ಗುತ್ತಿಗೆ ಕಾರ್ಮಿಕರಿಗೆ ಬಟ್ಟೆ, ಶೂ ಮತ್ತು ಸುರಕ್ಷತಾ ವಸ್ತುಗಳನ್ನು ನೀಡಿಲ್ಲ ಎಂದು ಕಾರ್ಮಿಕರು ಆರೋಪಿಸಿದ್ದಾರೆ.