ನೆಲಮಂಗಲ: ಅಕ್ರಮವಾಗಿ ಬೇರೆ ರಾಜ್ಯಗಳಿಗೆ ಕಾರ್ಮಿಕರನ್ನ ವರ್ಗಾವಣೆ ಮಾಡಿದ ನವಯುಗ ಟೋಲ್ ಆಡಳಿತ ಮಂಡಳಿಯ ವಿರುದ್ಧ ಕಾರ್ಮಿಕರು ಪ್ರತಿಭಟನೆ ನಡೆಸಿದರು.
ಬೇರೆ ರಾಜ್ಯಗಳಿಗೆ ಕಾರ್ಮಿಕರ ವರ್ಗಾವಣೆ: ನವಯುಗ ಟೋಲ್ ವಿರುದ್ಧ ಕಾರ್ಮಿಕರ ಪ್ರತಿಭಟನೆ - ನವಯುಗ ಟೋಲ್ ವಿರುದ್ಧ ಕಾರ್ಮಿಕರ ಪ್ರತಿಭಟನೆ.
ನವಯುಗ ಟೋಲ್ ಆಡಳಿತ ಮಂಡಳಿಯು ಅಕ್ರಮವಾಗಿ ಬೇರೆ ರಾಜ್ಯಗಳಿಗೆ ಕಾರ್ಮಿಕರನ್ನು ವರ್ಗಾವಣೆ ಮಾಡಿದ್ದನ್ನು ವಿರೋಧಿಸಿ ಕಾರ್ಮಿಕರು ಪ್ರತಿಭಟನೆ ನಡೆಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪಟ್ಟಣದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ನವಯುಗ ಟೋಲ್ ಆಡಳಿತ ಮಂಡಳಿ ಇಲ್ಲಿನ ಕಾರ್ಮಿಕರನ್ನು ಅಕ್ರಮವಾಗಿ ಬೇರೆ ರಾಜ್ಯಗಳಿಗೆ ವರ್ಗಾವಣೆ ಮಾಡಿತ್ತು ಮತ್ತು ಕಾರ್ಮಿಕರಿಗೆ ಮೂಲಭೂತ ಸೌಕರ್ಯಗಳನ್ನ ಕೊಟ್ಟಿರಲಿಲ್ಲ. ಇದರ ವಿರುದ್ಧ ಸಿಡಿದೆದ್ದ ಕಾರ್ಮಿಕರು, ಪಟ್ಟಣದ ಟಿಬಿ ಬಸ್ ಸ್ಟಾಪ್ನಿಂದ ನವಯುಗ ಟೋಲ್ ಆಫೀಸ್ ವರೆಗೆ ಪ್ರತಿಭಟನಾ ಜಾಥಾ ನಡೆಸಿದರು.
ಕಾರ್ಮಿಕರ ನ್ಯಾಯಾಲಯದ ಸಹಾಯಕ ಕಾರ್ಮಿಕ ಆಯುಕ್ತರ ತೀರ್ಪನ್ನು ಉಲ್ಲಂಘಿಸಿದ ಆಡಳಿತ ಮಂಡಳಿ, ಕಾರ್ಮಿಕರನ್ನ ಬೇರೆ ರಾಜ್ಯಗಳಿಗೆ ವರ್ಗಾವಣೆ ಮಾಡಿದೆ. ಕೂಡಲೇ ವರ್ಗಾವಣೆಗೊಂಡಿರುವ ಕಾರ್ಮಿಕರಿಗೆ ಇಲ್ಲಿಯೇ ಕೆಲಸ ಕೊಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.