ಆನೇಕಲ್: ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲೆ ಪ್ರೌಢಶಾಲೆ ಮತ್ತು ಕಾಲೇಜುಗಳಲ್ಲಿ ಯೋಗವನ್ನು ಪಠ್ಯವಾಗಿ ಬೋಧಿಸಲು ಸಿದ್ಧತೆಯನ್ನು ಈಗಿಂದಲೇ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. ಅಲ್ಲದೆ, ಅದಕ್ಕೆ ಬೇಕಾದ ಪರಿಣಿತರ ಮಾರ್ಗದರ್ಶನವನ್ನು ಪಡೆಯಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಆನೇಕಲ್ ತಾಲೂಕಿನ ಜಿಗಣಿ ಭಾಗದ ಪ್ರಶಾಂತಿ ಕುಟೀರದಲ್ಲಿ ಏರ್ಪಡಿಸಲಾಗಿದ್ದ 24ನೇ ಅಂತಾರಾಷ್ಟ್ರೀಯ ಯೋಗ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಬಾಗವಹಿಸಿ ಮಾತನಾಡಿದರು. ಯೋಗದಿಂದ ಸ್ಥಿತಪ್ರಜ್ಞೆ, ಸಮಯಪ್ರಜ್ಞೆ, ಸಾತ್ವಿಕತೆಯ ಮೂಲಕ ಆರೋಗ್ಯಕರ ಸಮಾಜ ನಿರ್ಮಾಣ ಮಾಡಲು ಸಾಧ್ಯ. ಹೀಗಾಗಿ ಮಕ್ಕಳಲ್ಲಿ ಏಕಾಗ್ರತೆಗಾಗಿ ಯೋಗ ಬೋಧಿಸಲು ತೀರ್ಮಾನಿಸಲಾಗಿದೆ ಎಂದರು. ಪ್ರಶಾಂತಿ ಕುಟೀರದ ಎಸ್-ವ್ಯಾಸ ನಾಸವನ್ನು ನಿರ್ಮಿಸಲಿದೆ. ಯಾಕಂದರೆ ಸ್ಪಿರಿಚ್ಯುಯಾಲಿಟಿ ಮತ್ತು ವಿಜ್ಞಾನ ಒಂದೇ ನಾಣ್ಯದ ಎರಡು ಮುಖಗಳು ಎಂದು ಹೇಳಿದರು.