ದೊಡ್ಡಬಳ್ಳಾಪುರ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಯುವಕನ ಮೆದುಳು ನಿಷ್ಕ್ರೀಯಗೊಂಡಿತ್ತು. ಹೀಗಾಗಿ ಆತನ ಕುಟುಂಬಸ್ಥರು ಅಂಗಾಂಗ ದಾನ ಮಾಡಿದ್ದಾರೆ. ಈ ಮೂಲಕ ಯುವಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದು, ಮೂವರ ಬಾಳಿಗೆ ಬೆಳಕಾಗಿದ್ದಾನೆ.
ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟದ ಯುವಕ ಕೀರ್ತಿ (24) ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ. ವಾರದ ಹಿಂದೆ ಈತ ವಿಜಯಪುರದಲ್ಲಿರುವ ಅಕ್ಕನ ಮನೆಗೆ ಬೈಕ್ನಲ್ಲಿ ತೆರಳುತ್ತಿದ್ದ. ಈ ವೇಳೆ ಅಪಘಾತವಾಗಿದೆ. ಗಂಭೀರವಾಗಿ ಗಾಯಗೊಂಡು ನವಚೇತನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಕೋಮಾದಲ್ಲಿದ್ದ ಕೀರ್ತಿ ಸಾವು-ಬದುಕಿನ ನಡುವೆ ಹೋರಾಟ ಮಾಡುತ್ತಿದ್ದ. ಸೋಮವಾರ ಮೆದುಳು ನಿಷ್ಕ್ರೀಯಗೊಂಡಿದೆ ಎಂದು ವೈದ್ಯರು ಘೋಷಣೆ ಮಾಡಿದ್ದಾರೆ.