ಬೆಂಗಳೂರು: ಮಡಿಕೇರಿ ದಸರಾಗೆ ಒಂದು ಕೋಟಿ ರೂ.ಗಳ ಅನುದಾನವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಿಡುಗಡೆ ಮಾಡಿದ್ದಾರೆ.
ಮಡಿಕೇರಿ ದಸರಾಗೆ 1 ಕೋಟಿ ರೂ. ಬಿಡುಗಡೆಗೆ ಸಿಎಂ ಆದೇಶ - ಮಡಿಕೇರಿ ದಸರಾ ಸುದ್ದಿ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಡಿಕೇರಿ ದಸರಾ ಆಚರಣೆಗಾಗಿ ಒಂದು ಕೋಟಿ ರೂ. ಬಿಡುಗಡೆ ಮಾಡಿದ್ದಾರೆ. ಈ ಕುರಿತು ಮಡಿಕೇರಿ ದಸರಾ ಸಮಿತಿಯ ನಿಯೋಗವು ಸಿಎಂ ಗೃಹ ಕಚೇರಿ ಕೃಷ್ಣಾಗೆ ಆಗಮಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿತು.
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ
ಮಡಿಕೇರಿ ದಸರಾ ಸಮಿತಿಯ ನಿಯೋಗವು ಸಿಎಂ ಗೃಹ ಕಚೇರಿ ಕೃಷ್ಣಾಗೆ ಆಗಮಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿತು. ಮಡಿಕೇರಿ ದಸರಾ ಆಚರಣೆ ಕುರಿತು ಚರ್ಚೆ ನಡೆಸಿತು. ಈ ಸಂದರ್ಭದಲ್ಲಿ ಮಡಿಕೇರಿ ನಾಡ ಹಬ್ಬ ಆಚರಣೆಗೆಂದು ಸಿಎಂ ಒಂದು ಕೋಟಿ ಹಣವನ್ನು ಬಿಡುಗಡೆ ಮಾಡುವಂತೆ ಆದೇಶ ನೀಡಿದ್ದಾರೆ. ಈ ವೇಳೆ ಶಾಸಕ ಅಪ್ಪಚ್ಚು ರಂಜನ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಹಾಜರಿದ್ದರು.