ಬೆಂಗಳೂರು:ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾದ ಅನರ್ಹ ಶಾಸಕ ಡಾ. ಕೆ ಸುಧಾಕರ್ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಒಂದು ಕೋಟಿ ರೂಪಾಯಿಗಳ ಚೆಕ್ ನೀಡಿದ್ರು.
ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಕೋಟಿ ರೂ. ನೆರವು..
ಸಿಎಂ ಯಡಿಯೂರಪ್ಪ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾದ ಅನರ್ಹ ಶಾಸಕ ಡಾ.ಕೆ ಸುಧಾಕರ್ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಕೋಟಿ ರೂ. ಚೆಕ್ ನೀಡಿದ್ರು.
ಮಾಧ್ಯಮಗಳೊಂದಿಗೆ ಮಾತಾನಾಡಿದ ಅವರು,ನೆರೆ ಪ್ರವಾಹದಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರಿಗೆ ನಮ್ಮ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅಳಿಲು ಸೇವೆ ಮಾಡಿದ್ದೇವೆ. ಮಾಲಿನ್ಯ ನಿಯಂತ್ರಣ ಮಂಡಳಿ ಸಿಬ್ಬಂದಿ 1 ದಿನದ ಸಂಬಳ ಕೂಡ ನೀಡಿದ್ದಾರೆ. ನಮ್ಮ ಜಿಲ್ಲೆಯಿಂದಲೂ ಕೂಡ ಸಾಧ್ಯವಾದಷ್ಟು ನೆರವು ನೀಡಲು ನಿರ್ಧಾರ ಮಾಡಿದ್ದೇವೆ ಎಂದರು.
ಇನ್ನು, ನಮ್ಮ ಅನರ್ಹತೆ ಸಂಬಂಧದ ಪ್ರಕರಣದ ವಿಚಾರಣೆ ಸುಪ್ರೀಂಕೋರ್ಟ್ನಲ್ಲಿ ಬಾಕಿ ಉಳಿದಿದೆ. ಈಗಾಗಲೇ ದೆಹಲಿಗೆ ಹೋಗಲು ಎಲ್ಲರೂ ನಿರ್ಧಾರ ಮಾಡಿದ್ದೇವೆ. ನಮ್ಮ ವಕೀಲರನ್ನ ಭೇಟಿ ಮಾಡಲಿಕ್ಕೆ ದೆಹಲಿಗೆ ತೆರಳುತ್ತಿದ್ದೇವೆ. ವಕೀಲರನ್ನ ಭೇಟಿ ಮಾಡಿ ಮಾತುಕತೆ ನಡೆಸುತ್ತೇವೆ ಎಂದರು.