ಕರ್ನಾಟಕ

karnataka

ETV Bharat / state

ಬ್ರಾಹ್ಮಣರಿಗೆ ಶೇ.10ರಷ್ಟು ಮೀಸಲು : ಜಾತಿ ಪ್ರಮಾಣಪತ್ರ ನೀಡಲು ಸರ್ಕಾರಿ ಆದೇಶ - 10 per cent reserve for Brahmins

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ವಿವಿಧ ಯೋಜನೆಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಈ ಪ್ರಮಾಣ ಪತ್ರಗಳನ್ನು ಪರಿಗಣಿಸಲು ಅನುಮತಿ ನೀಡಲಾಗಿದೆ. ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಡಿಸಿಎಂ ಗೋವಿಂದ ಎಂ. ಕಾರಜೋಳ ತಿಳಿಸಿದ್ದಾರೆ.

10-per-cent-reserve-for-brahmins-government-order-to-issue-a-caste-certificate
ಜಾತಿ ಪ್ರಮಾಣಪತ್ರ ನೀಡಲು ಸರಕಾರಿ ಆದೇಶ ಪ್ರಕಟ

By

Published : Jul 16, 2020, 2:14 AM IST

ಬೆಂಗಳೂರು:ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಶಿಕ್ಷಣ, ಉದ್ಯೋಗ, ಕೌಶಲ್ಯ ಅಭಿವೃದ್ಧಿ, ಸ್ವಯಂ ಉದ್ಯೋಗ ಹಾಗೂ ಇತರೆ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುವಂತೆ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ನೀಡಲು ಸರ್ಕಾರಿ ಆದೇಶ ಹೊರಡಿಸುವ ಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆದಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ತಿಳಿಸಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರವು ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇ. 10ರಷ್ಟು ಮೀಸಲಾತಿಯನ್ನು ಕಲ್ಪಿಸಿ ಆದೇಶ ಹೊರಡಿಸಿದೆ. ಆರ್ಥಿಕವಾಗಿ ಹಿಂದುಳಿದ ಎಲ್ಲಾ ಸಮುದಾಯದವರ ಶ್ರೇಯೋಭಿವೃದ್ಧಿಯ ಹಿತದೃಷ್ಠಿಯಿಂದ ಆದೇಶ ಹೊರಡಿಸಿತ್ತು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ನಮ್ಮ ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಈ ಆದೇಶದ ಅನುಷ್ಟಾನಕ್ಕಾಗಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ನೀಡಲು ಸರ್ಕಾರಿ ಆದೇಶ ಹೊರಡಿಸುವ ಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಆರ್ಥಿಕವಾಗಿ ಹಿಂದುಳಿದ ಎಲ್ಲಾ ವರ್ಗಗಳ ಕಲ್ಯಾಣ ನಮ್ಮ ಸರ್ಕಾರದ ಉದ್ದೇಶವಾಗಿದೆ ಎಂದು ಪತ್ರಿಕಾ ಹೇಳಿಕೆ ಮೂಲಕ ತಿಳಿಸಿದ್ದಾರೆ.

ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಶಿಕ್ಷಣ, ಕೌಶಲ್ಯ ಅಭಿವೃದ್ಧಿ, ಸ್ವಯಂ ಉದ್ಯೋಗ ಹಾಗೂ ಇತರೆ ಸೌಕರ್ಯಗಳನ್ನೊಳಗೊಂಡಂತೆ ಯೋಜನೆಗಳನ್ನು ಜಾರಿಗೊಳಿಸುವ ಉದ್ದೇಶಕ್ಕಾಗಿ ರಾಜ್ಯ ಸರ್ಕಾರವು ಬ್ರಾಹ್ಮಣ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಿದೆ. ಆರ್ಥಿಕವಾಗಿ ಹಿಂದುಳಿದ ಅರ್ಹ ಬ್ರಾಹ್ಮಣರಿಗೆ ಸೂಕ್ತ ಜಾತಿ ಹಾಗೂ ಆದಾಯ ಪ್ರಮಾಣ ಪತ್ರವನ್ನು ನೀಡಲು ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಕಂದಾಯ ಇಲಾಖೆಯು ಆದೇಶ ಹೊರಡಿಸಿದೆ.

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ವಿವಿಧ ಯೋಜನೆಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಈ ಪ್ರಮಾಣ ಪತ್ರಗಳನ್ನು ಪರಿಗಣಿಸಲು ಅನುಮತಿ ನೀಡಲಾಗಿದೆ. ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಡಿಸಿಎಂ ತಿಳಿಸಿದ್ದಾರೆ.

ABOUT THE AUTHOR

...view details