ಬೆಂಗಳೂರು:ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರ ಸಂಬಂಧಿ ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದೇ ಡಿ.ಜೆ ಹಳ್ಳಿ ಹಾಗೂ ಕೆ.ಜಿ ಹಳ್ಳಿ ಉದ್ವಿಗ್ನಗೊಳ್ಳಲು ಕಾರಣವಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ 100 ಜನರನ್ನ ಸಿಸಿಬಿ ಬಂಧಿಸಿದೆ.
ಘಟನೆಗೆ ಸಂಬಂಧಿಸಿದಂತೆ ಕೆ.ಜಿ ಹಳ್ಳಿ, ಡಿ.ಜೆ ಹಳ್ಳಿ ಠಾಣೆಯಲ್ಲಿ ಹತ್ತಕ್ಕೂ ಹೆಚ್ಚು ಎಫ್ಐಆರ್ ದಾಖಲಾಗಿವೆ.
ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ, ಕಚೇರಿ ಮೇಲೆ ಕಲ್ಲು ತೂರಾಟ; ಸ್ಥಳದಲ್ಲಿ ಬಿಗುವಿನ ವಾತಾವರಣ
ತಡ ರಾತ್ರಿ ಮೂರು ಗಂಟೆಯಿಂದ ಕಾರ್ಯಾಚರಣೆಗಿಳಿದ ಸಿಸಿಬಿ ಪೊಲೀಸರು ಇಲ್ಲಿಯವರೆಗೆ ನೂರು ಜನರನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ರಾತ್ರಿ ನಡೆದ ಗಲಾಟೆಯಲ್ಲಿ ಬರೋಬ್ಬರಿ ನೂರು ಜನ ಪೋಲಿಸರು ಗಾಯಗೊಂಡಿದ್ದು, ಪೊಲೀಸರಿಗೆ ಚಿಕಿತ್ಸೆ ನೀಡಲಾಗಿದೆ. ಗಾಳಿಯಲ್ಲಿ ಗುಂಡು ಹಾರಿಸಿದ ಕಾರಣ ಇಬ್ಬರು ಸಾವನ್ನಪ್ಪಿದ್ದು, ಗಾಯಗೊಂಡ ಕೆಲವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ಕೆಲವರು ಎಸ್ಕೇಪ್ ಆಗಿದ್ದಾರೆ ಎಂದು ತಿಳಿದು ಬಂದಿದೆ.
ಕೆ.ಜಿ ಹಳ್ಳಿ, ಹಾಗೂ ಡಿ.ಜೆ ಹಳ್ಳಿ ಬಳಿ ಬಿಗುವಿನ ವಾತಾವಾರಣ ನಿರ್ಮಾಣಗೊಂಡಿದ್ದು, ವಿಡಿಯೋ ಆಧಾರದ ಮೇರೆಗೆ ಆರೋಪಿಗಳ ಮಟ್ಟ ಹಾಕಲು ಪೊಲೀಸರು ಮುಂದಾಗಿದ್ದಾರೆ. ಇನ್ನು ಘಟಾನಾ ಸ್ಥಳಕ್ಕೆ ಗೃಹ ಸಚಿವರು ಭೇಟಿ ನೀಡುವ ಸಾಧ್ಯತೆ ಇದೆ.