ಬೆಂಗಳೂರು: ಗೌರಿ ಗಣೇಶ ಹಬ್ಬದ ನಿಮಿತ್ತ ಕೆಎಸ್ಆರ್ಟಿಸಿ ಸೆಪ್ಟೆಂಬರ್ 8 ಹಾಗೂ 9 ರಂದು ನಗರದ ವಿವಿಧ ಸ್ಥಳಗಳಿಂದ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ಬೆಂಗಳೂರಿನಿಂದ 1000ಕ್ಕೂ ಹೆಚ್ಚು ಬಸ್ಗಳನ್ನು ರಸ್ತೆಗಿಳಿಸುವ ತೀರ್ಮಾನ ಕೈಗೊಂಡಿದೆ.
ರಾಜ್ಯ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಿಗೆ ಸೆಪ್ಟೆಂಬರ್ 12 ರಂದು ವಿಶೇಷ ವಾಹನಗಳನ್ನ ರಸ್ತೆಗಿಳಿಸಲು ನಿರ್ಧರಿಸಲಾಗಿದೆ. ಇನ್ನು ಪ್ರಯಾಣಿಕರ ಅನುಕೂಲಕ್ಕಾಗಿ ಮುಂಗಡವಾಗಿ ಆಸನಗಳನ್ನ ಕಾಯ್ದಿರಿಸುವ ಸೌಲಭ್ಯವನ್ನೂ ಸಹ ಮಾಡಲಾಗಿದೆ.
4 ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದರೆ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಹಾಗೆಯೇ ಹೋಗಿ ಬರುವ ಪ್ರಯಾಣದ ಟಿಕೆಟ್ ಬುಕ್ಕಿಂಗ್ ಮಾಡಿದರೆ ಪ್ರಯಾಣ ದರದಲ್ಲಿ ಶೇ. 10 ರಷ್ಟು ರಿಯಾಯಿತಿ ನೀಡಲಾಗುತ್ತೆ. ಕೋವಿಡ್ ಹಿನ್ನೆಲೆ ಪ್ರಯಾಣಿಕರು ಮಾರ್ಗಸೂಚಿ ಪಾಲಿಸುವಂತೆ ಇಲಾಖೆ ಇದೇ ವೇಳೆ ಸೂಚಿಸಿದೆ.