ಬಳ್ಳಾರಿ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರದಿಂದ ಆರು ದಿನಗಳವರೆಗೆ ಅಂದರೆ ಆಗಸ್ಟ್ 3ರವರೆಗೆ ದೈಹಿಕ ಪರೀಕ್ಷೆ ನಡೆಯಲಿದೆ ಎಂದು ಪೊಲೀಸ್ ಇಲಾಖೆಯಿಂದ ಮಾಹಿತಿ ದೊರೆತಿದೆ. ಬಳ್ಳಾರಿ ವಲಯ ವ್ಯಾಪ್ತಿಯ ಬಳ್ಳಾರಿ, ಕೊಪ್ಪಳ, ರಾಯಚೂರು ಈ ಮೂರು ಜಿಲ್ಲೆಗಳ ಅಭ್ಯರ್ಥಿಗಳ ಜೊತೆಗೆ ರಾಜ್ಯದ ವಿವಿಧ ಜಿಲ್ಲೆಯ ಸಾವಿರಾರು ವಿದ್ಯಾರ್ಥಿಗಳು ಅರ್ಜಿ ಹಾಕಿದ್ದಾರೆ. ಅದರಲ್ಲಿ 1600 ಮೀಟರ್ ಓಟ, ಎತ್ತರ ಜಿಗಿತ, ಉದ್ದ ಜಿಗಿತ, ಗುಂಡು ಎಸೆತ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಭಾಗವಹಿಸುತ್ತಿದ್ದಾರೆ.
16 ಹುದ್ದೆಗೆ ಸಾವಿರಾರು ಅಭ್ಯರ್ಥಿಗಳು