ಕರ್ನಾಟಕ

karnataka

ETV Bharat / state

ಅಮೆರಿಕದಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದ 105 ಮಂದಿ ಕನ್ನಡಿಗರು - ಲಾಕ್​ಡೌನ್​ಗೆ ಸಿಲುಕಿದ್ದ ಕನ್ನಡಿಗರು

ವಂದೇ ಭಾರತ್ ಮಿಷನ್ ಅಡಿಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ 23ನೇ ಏರ್ ಇಂಡಿಯಾ ವಿಮಾನದಲ್ಲಿ 105 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ.

ವಿಮಾನ ನಿಲ್ದಾಣ
ವಿಮಾನ ನಿಲ್ದಾಣ

By

Published : May 30, 2020, 10:58 AM IST

ದೇವನಹಳ್ಳಿ:ಅಮೆರಿಕದ ವಾಷಿಂಗ್ಟನ್​ನಲ್ಲಿ ಲಾಕ್​ಡೌನ್​ಗೆ ಸಿಲುಕಿದ್ದ ಕನ್ನಡಿಗರು ಇಂದು ಬೆಳಗಿನ ಜಾವ 3.15ಕ್ಕೆ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದು ಇಳಿದಿದ್ದಾರೆ.

ವಂದೇ ಭಾರತ್ ಮಿಷನ್ ಅಡಿಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ 23ನೇ ಏರ್ ಇಂಡಿಯಾ ವಿಮಾನ ಇದಾಗಿದೆ. ಈ ವಿಮಾನದಲ್ಲಿ 105 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ. ಇವರಲ್ಲಿ ಎರಡು ಮಕ್ಕಳು ಸೇರಿದಂತೆ 54 ಪುರುಷರು ಮತ್ತು 49 ಮಹಿಳೆಯರು ಇದ್ದಾರೆ. ನಂತರ ಏರ್ ಇಂಡಿಯಾ ವಿಮಾನವು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗುಜರಾತ್​ನ ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ತೆರಳಿತು.

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ 105 ಕನ್ನಡಿಗರು

ತಜ್ಞ ವೈದ್ಯರು ಹಾಗೂ ಸಿಬ್ಬಂದಿ 105 ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದರು. ಬಳಿಕ ಎಲ್ಲರನ್ನು 14 ದಿನಗಳ ಕ್ವಾರಂಟೈನ್​ಗಾಗಿ ಹೋಟೆಲ್​ಗಳಿಗೆ ಕಳುಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.

ABOUT THE AUTHOR

...view details