ಕರ್ನಾಟಕ

karnataka

ETV Bharat / state

ರಾಜ್ಯದಲ್ಲಿಂದು 10,517 ಕೊರೊನಾ ಪಾಸಿಟಿವ್ ಕೇಸ್ ಪತ್ತೆ:  8,347 ಮಂದಿ ಗುಣಮುಖ

ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದಾಗಿ ಚಿಕಿತ್ಸೆ ಫಲಿಸದೇ ಒಟ್ಟು 102 ಮಂದಿ ಸಾವನ್ನಪ್ಪಿದ್ದಾರೆ.

corona
ಕೊರೊನಾ

By

Published : Oct 10, 2020, 8:51 PM IST

ಬೆಂಗಳೂರು:ರಾಜ್ಯದಲ್ಲಿಂದು ಹೊಸದಾಗಿ 10,517 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 7,00,786ಕ್ಕೆ ಏರಿಕೆಯಾಗಿದೆ.

ಸೋಂಕಿನಿಂದ ಇಂದು 8,347 ಮಂದಿ ಗುಣಮುಖರಾಗಿದ್ದು, ಇದುವರೆಗೂ ಒಟ್ಟು 5,69,947 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಇಂದು ಕೋವಿಡ್​ಗೆ ಬಲಿಯಾದವರ ಸಂಖ್ಯೆಯಲ್ಲಿ ಏರಿಕೆ ಕಂಡಿದ್ದು, 102 ಮಂದಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಸದ್ಯ ರಾಜ್ಯದಲ್ಲಿ ಸಕ್ರಿಯ 12,0,929 ಪ್ರಕರಣಗಳು ಇದ್ದು, ಐಸಿಯುನಲ್ಲಿ 892 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರು ನಗರದಲ್ಲಿ ಇಂದು 4,563 ಮಂದಿಯಲ್ಲಿ ಇಂದು ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,76,934ಕ್ಕೆ ಏರಿದೆ. ಇಂದು ನಗರದಲ್ಲಿ 30 ಮಂದಿ ಮೃತಪಟ್ಟಿದ್ದಾರೆ. ಒಟ್ಟು ಸಾವಿನ ಸಂಖ್ಯೆ ನಗರದಲ್ಲಿ 3,320 ದಾಖಲಾಗಿದೆ. ಹಾಗೂ ಇಂದು 1,726 ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 2,08,702 ಏರಿದೆ. ಸದ್ಯ ನಗರದಲ್ಲಿ 64,911 ಸಕ್ರಿಯ ಪ್ರಕರಣಗಳಿವೆ.

ABOUT THE AUTHOR

...view details