ಬೆಂಗಳೂರು:107ನೇ ರಾಷ್ಟ್ರೀಯ ವಿಜ್ಞಾನ ಕಾಂಗ್ರೆಸ್ ಸಮಾವೇಶದ ಸಮಾರೋಪ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಯುತ್ತಿದೆ. ಇನ್ನೊಂದೆಡೆ ಕಳೆದ ನಾಲ್ಕು ದಿನಗಳಿಂದ ಇಲ್ಲಿಯೇ ಬೀಡುಬಿಟ್ಟಿದ್ದ ಅತಿಥಿಗಳು ತಮ್ಮ ತಮ್ಮ ಊರಿನತ್ತ ಪ್ರಯಾಣ ಬೆಳೆಸಲು ಸಜ್ಜಾಗಿದ್ದಾರೆ.
107ನೇ ರಾಷ್ಟ್ರೀಯ ವಿಜ್ಞಾನ ಕಾಂಗ್ರೆಸ್ ಸಮಾವೇಶ ಸಮಾರೋಪಕ್ಕೆ ಸಿದ್ಧತೆ - 107 ನೇ ರಾಷ್ಟ್ರೀಯ ವಿಜ್ಞಾನ ಕಾಂಗ್ರೆಸ್ ಸಮಾವೇಶ ಸಮಾರೋಪ
107ನೇ ರಾಷ್ಟ್ರೀಯ ವಿಜ್ಞಾನ ಕಾಂಗ್ರೆಸ್ ಸಮಾವೇಶದ ಸಮಾರೋಪ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಯುತ್ತಿದೆ. ಇನ್ನೊಂದೆಡೆ ಕಳೆದ ನಾಲ್ಕು ದಿನಗಳಿಂದ ಇಲ್ಲಿಯೇ ಬೀಡುಬಿಟ್ಟಿದ್ದ ಅತಿಥಿಗಳು ತಮ್ಮ ತಮ್ಮ ಊರಿನತ್ತ ಪ್ರಯಾಣ ಬೆಳೆಸಲು ಸಜ್ಜಾಗಿದ್ದಾರೆ.
![107ನೇ ರಾಷ್ಟ್ರೀಯ ವಿಜ್ಞಾನ ಕಾಂಗ್ರೆಸ್ ಸಮಾವೇಶ ಸಮಾರೋಪಕ್ಕೆ ಸಿದ್ಧತೆ 107th National Science Congress Conference ceremony, 107 ನೇ ರಾಷ್ಟ್ರೀಯ ವಿಜ್ಞಾನ ಕಾಂಗ್ರೆಸ್ ಸಮಾವೇಶ ಸಮಾರೋಪ](https://etvbharatimages.akamaized.net/etvbharat/prod-images/768-512-5622873-thumbnail-3x2-congress.jpg)
ನಗರದ ಜಿಕೆವಿಕೆ ಆವರಣದಲ್ಲಿ ಜ. 3ರಿಂದ ಆರಂಭವಾಗಿರುವ 107ನೇ ರಾಷ್ಟ್ರೀಯ ವಿಜ್ಞಾನ ಕಾಂಗ್ರೆಸ್ ಸಮಾವೇಶದಲ್ಲಿ ಈಗಾಗಲೇ ಮಕ್ಕಳು, ಮಹಿಳೆಯರು, ರೈತರು ಹಾಗೂ ವಿಜ್ಞಾನ ಸಂಬಂಧಿ ಹಲವು ಕಾರ್ಯಕ್ರಮಗಳು ನೆರವೇರಿದ್ದು, ಇಂದು ಸಂಜೆ 4:30ಕ್ಕೆ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಸಮಾರೋಪ ಸಮಾರಂಭ ನೆರವೇರಿಸಲಿದ್ದಾರೆ.
ಈ ಕಾರ್ಯಕ್ರಮ ಜಿಕೆವಿಕೆ ಆವರಣದ ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತಾರಾಷ್ಟ್ರೀಯ ಸಮುದಾಯ ಕೇಂದ್ರದಲ್ಲಿ ನಡೆಯಲಿದೆ. ಸಿಎಂ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಸದಾನಂದಗೌಡ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಇನ್ನೊಂದೆಡೆ ಮುಖ್ಯ ವೇದಿಕೆ ಕೂಡ ತೆರವುಗೊಳಿಸಲಾಗಿದೆ.