ಬೆಂಗಳೂರು:ರಾಜ್ಯದಲ್ಲಿಂದು 13,972 ಮಂದಿಗೆ ಕೊರೊನಾ ಪರೀಕ್ಷೆ ನಡೆಸಿದ್ದು, ಇದರಲ್ಲಿ 109 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 39,49,882 ಕ್ಕೆ ಏರಿಕೆ ಆಗಿದೆ. ಪಾಸಿಟಿವ್ ದರವೂ ಶೇ 0.78 ಕ್ಕೆ ಏರಿಕೆ ಕಂಡಿದೆ. ಇತ್ತ 147 ಸೋಂಕಿತರು ಗುಣಮುಖರಾಗಿದ್ದು, ಈ ತನಕ 39,07,975 ಮಂದಿ ಡಿಸ್ಜಾರ್ಜ್ ಆಗಿದ್ದಾರೆ. ಇಂದು ಯಾವುದೇ ವ್ಯಕ್ತಿ ಸೋಂಕಿಗೆ ಮೃತಪಟ್ಟ ಬಗ್ಗೆ ವರದಿಯಾಗಿಲ್ಲ. ಸದ್ಯ ಸಾವಿನ ಸಂಖ್ಯೆ 40,063 ರಷ್ಟಿದೆ. ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 1,802 ರಷ್ಟಿದೆ. ವಿಮಾನ ನಿಲ್ದಾಣದಲ್ಲಿ 4,150 ಮಂದಿ ತಪಾಸಣೆಗೆ ಒಳಪಟ್ಟಿದ್ದಾರೆ.
ಇದನ್ನೂ ಓದಿ:ತುರ್ತು ಸಭೆ ಕರೆದ ಸಿಎಂ ಬಸವರಾಜ ಬೊಮ್ಮಾಯಿ