ಬೆಂಗಳೂರು: ಕಳೆದ ಒಂದು ವರ್ಷದಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕೋವಿಡ್ ನಿಯಮ ಉಲ್ಲಂಘಿಸಿದ ಪ್ರಕರಣಗಳಿಂದ ಒಟ್ಟು 11.35 ಕೋಟಿ ರೂ.ಗಳಿಗೂ ಅಧಿಕ ದಂಡ ವಸೂಲಿ ಮಾಡಲಾಗಿದೆ.
ಕಳೆದ ಒಂದು ವರ್ಷದಿಂದ ಕೋವಿಡ್ ಸೋಕು ಆರಂಭವಾದ ನಂತರದಿಂದ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ನಗರದ ಜನನಿಬಿಡ ಪ್ರದೇಶಗಳಲ್ಲಿ ಪಾಲಿಕೆ ಮಾರ್ಷಲ್ಗಳು ಜನರು ಮಾಸ್ಕ್ ಹಾಕುವ ನಿಯಮ ಪಾಲನೆ ಮಾಡುವಂತೆ ಎಚ್ಚರಿಸುತ್ತಾ ಬಂದಿದ್ದಾರೆ.