ಬೆಂಗಳೂರು: ನಗರದಲ್ಲಿ ಇಂದು 113 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಒಟ್ಟು ಸಂಖ್ಯೆ 1,791 ಕ್ಕೆ ಏರಿಕೆಯಾಗಿದೆ. ಇತ್ತ ಐಸಿಯುನಲ್ಲಿ ದಾಖಲಾದವರ ಪ್ರಮಾಣವೂ ಹೆಚ್ಚುತ್ತಿದ್ದು, 112 ಮಂದಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸಿಲಿಕಾನ್ ಸಿಟಿಯಲ್ಲಿ ಇಂದು 30 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈ ವರೆಗೆ 505 ಮಂದಿ ಗುಣಮುಖರಾಗಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾ ಸೋಂಕಿಗೆ ಇಲ್ಲಿಯವರೆಗೆ 78 ಮಂದಿ ಮೃತಪಟ್ಟಿದ್ದಾರೆ. ಇಂದು ಪತ್ತೆಯಾದ 113 ಪ್ರಕರಣಗಳಲ್ಲಿ 10 ಮಂದಿಗೆ ಸೋಂಕಿತರ ಸಂಪರ್ಕದಿಂದ ಕೊರೊನಾ ಬಂದಿದೆ ಎಂದು ಗೊತ್ತಾಗಿದ್ದು, ಉಳಿದ ಎಲ್ಲಾ ಪ್ರಕರಣಗಳ ಸಂಪರ್ಕ ಪತ್ತೆಹಚ್ಚಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ವರದಿ ನೀಡಿದೆ.