ಬೆಂಗಳೂರು:ರಾಜ್ಯದಲ್ಲಿ ಕೊರೊನಾ ಮಹಾಮಾರಿ ಅಟ್ಟಹಾಸ ಮುಂದುವರಿದಿದ್ದು, ಇಂದು ಮಧ್ಯಾಹ್ನದ ವೇಳೆಗೆ 116 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿವೆ.
ರಾಜ್ಯದಲ್ಲಿಂದು ಮತ್ತೆ 116 ಮಂದಿಗೆ ಕೊರೊನಾ: ಸೋಂಕಿತರ ಸಂಖ್ಯೆ 1578ಕ್ಕೆ ಏರಿಕೆ - ರಾಜ್ಯದಲ್ಲಿ ಕೊರೊನಾ ಪ್ರಕರಣ
ರಾಜ್ಯದಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸ ಮುಂದುವೆರದಿದ್ದು, ಇಂದು ಮತ್ತೆ 116 ಮಂದಿಗೆ ಸೋಂಕು ತಗುಲಿದೆ.
ಇದರಿಂದ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 1578ಕ್ಕೆ ಏರಿಕೆಯಾಗಿದೆ. ಇಂದು 14 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕೊರೊನಾಗೆ ಬಲಿಯಾದವರ ಸಂಖ್ಯೆ 41 ಇದ್ದು, ಈವರೆಗೆ ಒಟ್ಟು 570 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಮಹಾರಾಷ್ಟ್ರದಿಂದ ಬಂದ ಬರೋಬ್ಬರಿ 73 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಇನ್ನು ದುಬೈನಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಬಂದ 6 ಮಂದಿಗೆ ಸೋಂಕು ತಗುಲಿದೆ.
ಇದಲ್ಲದೆ ಜಾರ್ಖಂಡ್, ತಮಿಳುನಾಡು, ತೆಲಂಗಾಣದಿಂದ ಪ್ರಯಾಣ ಬೆಳೆಸಿ ರಾಜ್ಯಕ್ಕೆ ಬಂದವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಉತ್ತರ ಕನ್ನಡ, ಉಡುಪಿ, ಶಿವಮೊಗ್ಗದಲ್ಲಿ ಒಂದು ವರ್ಷದ ಇಬ್ಬರು ಮಕ್ಕಳಿಗೆ ಕೊರೊನಾ ತಗುಲಿದೆ. ಇದಲ್ಲದೆ ಎರಡು, ಮೂರು, ಏಳು ವರ್ಷದ ಮಕ್ಕಳಿಗೂ ಕೊರೊನಾ ವಕ್ಕರಿಸಿದೆ.