ಬೆಂಗಳೂರು: ರಾಜ್ಯದಲ್ಲಿಂದು 15,881 ಮಂದಿಗೆ ಕೊರೊನಾ ಪರೀಕ್ಷೆ ನಡೆಸಿದ್ದು, ಇವರಲ್ಲಿ 118 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 39,50,770ಕ್ಕೆ ಏರಿಕೆ ಆಗಿದೆ. ಪಾಸಿಟಿವ್ ದರವೂ 0.74%ಕ್ಕೆ ಏರಿಕೆ ಕಂಡಿದೆ. ಇತ್ತ 121 ಸೋಂಕಿತರು ಗುಣಮುಖರಾಗಿದ್ದು, ಈ ತನಕ 39,08,949 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಸೋಂಕಿನಿಂದ ಯಾವುದೇ ವ್ಯಕ್ತಿ ಮೃತಪಟ್ಟ ಬಗ್ಗೆ ವರದಿಯಾಗಿಲ್ಲ, ಸಾವಿನ ಸಂಖ್ಯೆ 40,064 ರಷ್ಟಿದೆ. ಸದ್ಯ ಸಕ್ರಿಯ ಪ್ರಕರಣಗಳು 1,715 ರಷ್ಟಿದೆ. ವಿಮಾನ ನಿಲ್ದಾಣದಲ್ಲಿ 4,356 ಮಂದಿ ತಪಾಸಣೆಗೆ ಒಳಪಟ್ಟಿದ್ದಾರೆ.
ಇದನ್ನೂ ಓದಿ:ಮಳೆಯ ಜೂಜಾಟಕ್ಕೆ ಕಂಗಾಲಾದ ರೈತ: ಕೈಗೆ ಬಂದ ತುತ್ತು ಬಾಯಿಗೆ ಬರದೇ ನಿರಾಸೆ