ಬೆಂಗಳೂರು: ರಾಜ್ಯದಲ್ಲಿಂದು ಸಾವಿರಕ್ಕೂ ಹೆಚ್ಚು ಜನರಿಗೆ ಕೊರೊನಾ ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 9,09,469 ತಲುಪಿದೆ.
ಇಂದು ಸಾವಿಗೀಡಾದವರ ಪೈಕಿ 19 ಮಂದಿ ಸೋಂಕಿತರು ಅನ್ಯ ಕಾರಣಕ್ಕೆ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಸೋಂಕಿತರ ಪ್ರಮಾಣ ಶೇ 1.08 ರಷ್ಟಿದೆ. ಸಾವಿನ ಪ್ರಮಾಣ ಶೇ 0.41 ರಷ್ಟು ದಾಖಲಾಗಿದೆ.
ಓದಿ:ಮಡೆಸ್ನಾನದ ಬದಲು ಎಡೆಸ್ನಾನ: ಮುಚ್ಲಗೋಡು ದೇವಸ್ಥಾನದಲ್ಲಿ ಹರಕೆ ತೀರಿಸಿದ ಭಕ್ತರು
ಕೊರೊನಾದಿಂದ 1,062 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 8,82,944 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 219 ಸೋಂಕಿತರು ತೀವ್ರ ನಿಗಾ ಘಟಕದಲ್ಲಿದ್ದು, ರಾಜ್ಯದಲ್ಲಿ ಸದ್ಯ 14,497 ಸಕ್ರಿಯ ಪ್ರಕರಣಗಳಿವೆ.
ಕಳೆದ 7 ದಿನಗಳಲ್ಲಿ 24,887 ಜನರು ಹೋಂ ಕ್ವಾರಂಟೈನ್‌ನಲ್ಲಿ ಇದ್ದಾರೆ. ಸೋಂಕಿತರ ಪ್ರಾಥಮಿಕ ಸಂಪರ್ಕದಲ್ಲಿ 80,004 ಹಾಗೂ ದ್ವಿತೀಯ ಸಂಪರ್ಕದಲ್ಲಿ 90,102 ಜನರು ಇದ್ದಾರೆ.