ಕರ್ನಾಟಕ

karnataka

ETV Bharat / state

ವೀಸಾ ಅವಧಿ ಮುಗಿದರೂ ಅಕ್ರಮವಾಗಿ ನೆಲೆಸಿದ್ದ 12 ವಿದೇಶಿ ಪ್ರಜೆಗಳ ಬಂಧನ - undefined

ಈಶಾನ್ಯ ವಿಭಾಗದ ಯಲಹಂಕ ಪೊಲೀಸರು ಹಾಗೂ ಎಆರ್‌ಆರ್‌ಓ ಅಧಿಕಾರಿಗಳ ಜೊತೆ ಜಂಟಿ ಕಾರ್ಯಾಚರಣೆ ನಡೆಸಿ, ಯಲಹಂಕ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ನೆಲೆಸಿದ್ದ 12 ಆಫ್ರಿಕಾ ಪ್ರಜೆಗಳನ್ನು ಬಂಧಿಸಿದ್ದಾರೆ.

12 ವಿದೇಶಿ ಪ್ರಜೆಗಳ ಬಂಧನ

By

Published : Jun 17, 2019, 3:49 AM IST

ಬೆಂಗಳೂರು: ವೀಸಾ ಅವಧಿ ಮುಗಿದಿದ್ದರೂ ಅಕ್ರಮವಾಗಿ ನೆಲೆಸಿದ್ದ ಆಫ್ರಿಕಾದ 12 ಪ್ರಜೆಗಳನ್ನು ಈಶಾನ್ಯ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

ಈಶಾನ್ಯ ವಿಭಾಗದ ಯಲಹಂಕ ಪೊಲೀಸರು ಹಾಗೂ ಎಆರ್‌ಆರ್‌ಓ ಅಧಿಕಾರಿಗಳ ಜೊತೆ ಜಂಟಿ ಕಾರ್ಯಾಚರಣೆ ನಡೆಸಿ, ಯಲಹಂಕ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ನೆಲೆಸಿದ್ದ 12 ಆಫ್ರಿಕಾ ಪ್ರಜೆಗಳನ್ನು ಬಂಧಿಸಿದ್ದಾರೆ.

ಆರೋಪಿಗಳು ವಿದ್ಯಾಭ್ಯಾಸ, ಬಿಸಿನೆಸ್ ಮತ್ತು ಟೂರಿಸ್ಟ್ ವೀಸಾ ಪಡೆದುಕೊಂಡು ಬೆಂಗಳೂರಿಗೆ ಬಂದಿದ್ದರು. ವೀಸಾ ಅವಧಿ ಮುಗಿದಿದ್ದರೂ ಸಹ ತಮ್ಮ ದೇಶಗಳಿಗೆ ಹಿಂತಿರುಗದೆ ವೀಸಾ ಅವಧಿ ವಿಸ್ತರಿಸಿಕೊಳ್ಳದೆ ಇಲ್ಲೇ ಬಾಡಿಗೆ ಮನೆ ಮಾಡಿಕೊಂಡು ಅಕ್ರಮ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು. ಇವರ ವಿರುದ್ಧ ಪಾಸ್‌ಪೋರ್ಟ್ ಹಾಗೂ ಫಾರಿನರ್ಸ್‌ ಕಾಯ್ದೆ ಹಾಗೂ ಐಪಿಸಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ತಮ್ಮ ದೇಶದಲ್ಲಿ ಕಡು ಬಡತನವಿರುವುದರಿಂದ ಆರೋಪಿಗಳು ವೀಸಾ ಅವಧಿ ಮುಗಿದಿದ್ದರೂ ನಗರದಲ್ಲಿ ನೆಲೆಸಿರುವುದು ಪತ್ತೆಯಾಗಿದೆ. ಬಂಧಿತ ಯಾವೊಬ್ಬ ಪ್ರಜೆಯೂ ಅಪರಾಧಿ ಹಿನ್ನೆಲೆಯಲ್ಲಿ ಭಾಗಿಯಾಗಿರುವುದಿಲ್ಲ. ಅವರ ಬಳಿ ಗಾಂಜಾ ಇನ್ನಿತರ ಮಾದಕ ವಸ್ತುಗಳು ಪತ್ತೆಯಾಗಿಲ್ಲ ಎಂದು ಡಿಸಿಪಿ ಕಲಾ ಕೃಷ್ಣಸ್ವಾಮಿ ತಿಳಿಸಿದ್ದಾರೆ.

For All Latest Updates

TAGGED:

ABOUT THE AUTHOR

...view details