ಬೆಂಗಳೂರು: ರಾಜ್ಯದಲ್ಲಿಂದು 20,888 ಮಂದಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 122 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 39,50,004 ಕ್ಕೆ ಏರಿಕೆ ಆಗಿದೆ. ಪಾಸಿಟಿವ್ ದರವೂ 0.72% ಕ್ಕೆ ಏರಿಕೆ ಕಂಡಿದೆ. ಇತ್ತ 162 ಸೋಂಕಿತರು ಗುಣಮುಖರಾಗಿದ್ದು, ಈ ತನಕ 39,08,137 ಮಂದಿ ಡಿಸ್ಜಾರ್ಜ್ ಆಗಿದ್ದಾರೆ. ಸೋಂಕಿಗೆ ಓಬ್ಬ ಮೃತಪಟ್ಟಿದ್ದು, ಸದ್ಯ ಮೃತರ ಸಂಖ್ಯೆ 40,064 ರಷ್ಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,761 ರಷ್ಟಿದೆ. ವಿಮಾನ ನಿಲ್ದಾಣದಲ್ಲಿ 4,180 ಮಂದಿ ತಪಾಸಣೆಗೆ ಒಳಪಟ್ಟಿದ್ದಾರೆ.
ಇದನ್ನೂ ಓದಿ:ನಾರಾಯಣಪುರ ನಾಲೆ ಆಧುನೀಕರಣದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: ಸಿದ್ದರಾಮಯ್ಯ ಆರೋಪ