ಬೆಂಗಳೂರು: ರಾಜ್ಯದಲ್ಲಿಂದು 1,28,269 ಜನರಿಗೆ ಕೊರೊನಾ ತಪಾಸಣೆ ನಡೆಸಲಾಗಿದೆ. ಇದರಲ್ಲಿ 1298 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ 29,31,827 ಕ್ಕೆ ಏರಿಕೆ ಕಂಡಿದೆ. ಪಾಸಿಟಿವಿಟಿ ದರ 1.01% ರಷ್ಟಿದೆ.
1833 ಸೋಂಕಿತರು ಗುಣಮುಖರಾಗಿದ್ದು, ಈ ತನಕ 28,73,281 ಜನರು ಆಸ್ಪತ್ರೆಗಳಿಂದ ಬಿಡುಗಡೆ ಆಗಿದ್ದಾರೆ. ಇತ್ತ ಸಕ್ರಿಯ ಪ್ರಕರಣಗಳು 21,481 ರಷ್ಟು ಇವೆ. 32 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 37,039ಕ್ಕೆ ಏರಿದೆ. ಸಾವಿನ ಪ್ರಮಾಣ 2.46% ರಷ್ಟಿದೆ.