ಯಲಹಂಕ:ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ 12 ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ 1281 ವಿದ್ಯಾರ್ಥಿಗಳು ಬ್ಯಾಚುಲರ್ ಆಫ್ ಇಂಜಿನಿಯರಿಂಗ್ ಹಾಗೂ ಮಾಸ್ಟರ್ಸ್ ಪದವಿ ಪ್ರದಾನ ಮಾಡಲಾಯಿತು.
ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಚಿನ್ನದ ಪದಕದೊಂದಿಗೆ ಪದವಿ ವಿತರಣೆ ಮಾಡಲಾಯಿತು, ಮೆಕ್ಯಾನಿಕ್ ಇಂಜಿನಿಯರಿಂಗ್ ವಿಭಾಗದ ಚಂದ್ರಶೇಖರ್ ಎಲ್ ಪ್ರತಿಷ್ಠಿತ ನಿಟ್ಟೆ ಗುಲಾಬಿಶೆಟ್ಟಿ ಸ್ಮರಣಾರ್ಥ ಚಿನ್ನದ ಪದಕ ಪಡೆದರು, ಅತ್ಯುತ್ತಮ ವಿದ್ಯಾರ್ಥಿನಿಗೆ ಸಲ್ಲುವ ನಿಟ್ಟೆ ಮೀನಾಕ್ಷಿ ಹೆಗ್ಡೆ ಸ್ಮರಣಾರ್ಥ ಚಿನ್ನದ ಪದಕ ಮೆಕ್ಯಾನಿಕ್ ಇಂಜಿನಿಯರಿಂಗ್ ವಿಭಾಗದ ಅಲಿನಿ ಕ್ರೈಸ್ಟ್ ಪೌಲ್ ಪಡೆದರು, ಅತ್ಯುತ್ತಮ ವಿದ್ಯಾರ್ಥಿಗೆ ಸಲ್ಲುವ ಜಸ್ಟಿಸ್ ಕೆ.ಎಸ್. ಹೆಗ್ಡೆ ಸ್ಮರಣಾರ್ಥ ಚಿನ್ನದ ಪದಕವನ್ನ ಕಂಪ್ಯೂಟರ್ ಸೈನ್ಸ್ ವಿಭಾಗದ ಕರಣ್ ಆರ್ ಪಡೆದರು.