ಬೆಂಗಳೂರು:ರಾಜ್ಯದಲ್ಲಿಂದು 1,321 ಜನರಿಗೆ ಕೊರೊನಾ ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,93,006ಕ್ಕೆ ಏರಿಕೆ ಆಗಿದೆ.
ಮಾರಕ ಕೋವಿಡ್ ಸೋಂಕಿಗೆ 10 ಜನ ಮೃತಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ 11,856 ತಲುಪಿದೆ. 19 ಸೋಂಕಿತರು ಅನ್ಯ ಖಾಯಿಲೆಯ ಕಾರಣಕ್ಕೆ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಸೋಂಕಿತರ ಪ್ರಮಾಣ ಶೇ 1.33 ರಷ್ಟಿದೆ. ಸಾವಿನ ಪ್ರಮಾಣ ಶೇ 0.75 ಇದೆ.
ಇಂದು ವೈರಸ್ ಬಾಧೆಯಿಂದ 889 ಜನ ಗುಣಮುಖರಾಗಿದ್ದು, ಈವರೆಗೆ 8,55,750 ಮಂದಿ ರಾಜ್ಯದ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. 280 ಸೋಂಕಿತರು ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಸದ್ಯ 25,381 ಸಕ್ರಿಯ ಪ್ರಕರಣಗಳಿವೆ. ಕಳೆದ 7 ದಿನಗಳಲ್ಲಿ 28,121 ಜನರು ಹೋಂ ಕ್ವಾರಂಟೈನ್ ನಲ್ಲಿದ್ದಾರೆ.