ಬೆಂಗಳೂರು: ನಗರದ ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣ ಸಂಬಂಧ ಬಂಧಿತನಾಗಿದ್ದ ಆರೋಪಿ ನವೀನ್ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಬೆಂಗಳೂರು ಗಲಭೆ ಪ್ರಕರಣ: ನವೀನ್ಗೆ 14 ದಿನ ನ್ಯಾಯಾಂಗ ಬಂಧನ - ಬೆಂಗಳೂರು ಗಲಭೆ
ಬೆಂಗಳೂರಿನ ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣ ಸಂಬಂಧ ಆರೋಪಿ ನವೀನ್ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಬೆಂಗಳೂರು
11ನೇ ಎಸಿಎಂಎಂ ನ್ಯಾಯಾಲಯವು ಈ ಆದೇಶ ಹೊರಡಿಸಿದೆ. ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಹಿನ್ನೆಲೆ ನವೀನ್ನನ್ನು ಬಂಧಿಸಲಾಗಿತ್ತು.
ವಸಂತನಗರದ ಗುರುನಾನಕ್ ಭವನದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಪೊಲೀಸರು 11ನೇ ಎಸಿಎಂಎಂ ನ್ಯಾಯಾಲಯಕ್ಕೆ ಆರೋಪಿಯನ್ನು ಹಾಜರುಪಡಿಸಿದ್ದರು. ಸದ್ಯ ವಿಚಾರಣೆ ಮುಗಿದಿರುವ ಕಾರಣ ಪೊಲೀಸರು ಪುನಃ ಕಸ್ಟಡಿಗೆ ಕೇಳದೆ ಇರುವ ಹಿನ್ನೆಲೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ. ಒಂದು ವೇಳೆ ಇನ್ನಷ್ಟು ತನಿಖೆಯ ಅಗತ್ಯ ಇದ್ದರೆ ಮತ್ತೆ ಪೊಲೀಸರು ವಶಕ್ಕೆ ಪಡೆಯುವ ಸಾದ್ಯತೆ ಇದೆ.
Last Updated : Aug 17, 2020, 3:56 PM IST