ಬೆಂಗಳೂರು:ಇಂದು ರಾಜ್ಯದಲ್ಲಿ 143 ಹೊಸ ಕೊರೊನಾ ಪ್ರಕರಣಗಳು ಕಂಡು ಬಂದಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 1605ಕ್ಕೆ ಏರಿಕೆಯಾಗಿದೆ.
ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನಕ್ಕೆ143 ಪ್ರಕರಣಗಳು ಪತ್ತೆಯಾಗಿವೆ. ಇನ್ನು ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. 571 ಮಂದಿ ಗುಣಮುಖರಾಗಿದ್ದು, ಒಟ್ಟು 992 ಜನರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಲ್ಲಿ ಒಂಭತ್ತು ಮಂದಿ ಐಸಿಯುನಲ್ಲಿದ್ದಾರೆ.
ಮತ್ತೊಂದು ಕೊರೊನಾ ಕೇಸ್ ಪತ್ತೆ:
ಸಂಜೆ ವೇಳೆಗೆ ಮತ್ತೊಂದು ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ರೋಗಿ-796 ಸಂಪರ್ಕದಿಂದ 36 ವರ್ಷದ ವ್ಯಕ್ತಿ ರೋಗಿ ನಂ(1604)ಗೆ ಸೋಂಕು ತಗುಲಿದೆ.
ರೋಗಿ 796, ಆಂಧ್ರಪ್ರದೇಶದ ನೆಲ್ಲೂರಿನ ವ್ಯಕ್ತಿಯಾಗಿದ್ದು, ಇವರು ವಿಕ್ಟೋರಿಯಾದಲ್ಲಿ ಪ್ಲಾಸ್ಮಾ ಥೆರಪಿ ನೀಡಿದರೂ ಚೇತರಿಕೆ ಕಾಣದೆ ತೀವ್ರ ಜ್ವರ, ಶ್ವಾಸಕೋಶದ ಸೋಂಕಿನಿಂದ ಮೃತಪಟ್ಟಿದ್ದರು. ಇದೀಗ ಅವರ ಸಂಪರ್ಕದಲ್ಲಿದ್ದ 36 ವರ್ಷದ ವ್ಯಕ್ತಿಗೆ ಕೊರೊನಾ ದೃಢಪಟ್ಟಿದೆ.
ಇಂದು ಪತ್ತೆಯಾಗಿರುವ ಕೊರೊನಾ ಪ್ರಕರಣಗಳ ಜಿಲ್ಲಾವಾರು ಮಾಹಿತಿ:
ಆರೋಗ್ಯ ಇಲಾಖೆ ಬಿಡುಗಡೆಗೊಳಿಸಿರುವ ಹೆಲ್ತ್ ಬುಲೆಟಿಲ್