ಬೆಂಗಳೂರು: ಲಾಕ್ಡೌನ್ ಹಿನ್ನೆಲೆ ಸಿಲಿಕಾನ್ ಸಿಟಿಯಲ್ಲಿ ಖಾಕಿ ಕಣ್ಗಾವಲು ಹೆಚ್ಚಾಗಿದೆ. ಈ ಹಿಂದೆ ಏಪ್ರಿಲ್ 20 ರವರೆಗೆ 144 ಸೆಕ್ಷನ್ ಜಾರಿಗೊಳಿಸಿದ್ದ ಕಮಿಷನರ್ ಭಾಸ್ಕರ್ ರಾವ್ ಇಂದಿನಿಂದ ಮತ್ತೆ ನಗರದಾದ್ಯಂತ ಮತ್ತೆ 144 ಸೆಕ್ಷನ್ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.
ಬೆಂಗಳೂರಲ್ಲಿ ಮತ್ತೆ 144ನೇ ಸೆಕ್ಷೆನ್ ಮುಂದುವರಿಕೆ: ಕಮಿಷನರ್ ಭಾಸ್ಕರ್ ರಾವ್ ಆದೇಶ
ಲಾಕ್ಡೌನ್ ಹಿನ್ನೆಲೆ ಸಿಲಿಕಾನ್ ಸಿಟಿಯಲ್ಲಿ ಖಾಕಿ ಕಣ್ಗಾವಲು ಹೆಚ್ಚಾಗಿದೆ. ಈ ಹಿಂದೆ ಏಪ್ರಿಲ್ 20 ರವರೆಗೆ 144 ಸೆಕ್ಷನ್ ಜಾರಿಗೊಳಿಸಿದ್ದ ಬೆಂಗಳೂರು ಕಮಿಷನರ್ ಭಾಸ್ಕರ್ ರಾವ್ ಇಂದಿನಿಂದ ಮತ್ತೆ ನಗರದಾದ್ಯಂತ ಮತ್ತೆ 144 ಸೆಕ್ಷನ್ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.
ಕಮಿಷನರ್ ಭಾಸ್ಕರ್ ರಾವ್ ಆದೇಶ
ನಿನ್ನೆ ಪಾದರಾಯನಪುರದಲ್ಲಿ ನಡೆದ ಗಲಾಟೆ ಹಿನ್ನೆಲೆ ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ, ಕಠಿಣ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ.
ಇನ್ನು ನಗರದಲ್ಲಿ ಮೇ 3ರವರೆಗೆ ಲಾಕ್ಡೌನ್ ಮುಂದುವರೆಯಲಿದ್ದು, ಸಿಎಂ ಯಡಿಯೂರಪ್ಪ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಪೊಲೀಸ್ ಇಲಾಖೆಗೆ ಸೂಚಿಸಿದ್ದಾರೆ.