ಬೆಂಗಳೂರು:ರಾಜ್ಯದಲ್ಲಿ ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಗೆ ಬರುವ ಶಾಲಾ ಕಾಲೇಜುಗಳ ಸುತ್ತ 200 ಮೀಟರ್ವರೆಗೆ ಜನರು ಗುಂಪುಗೂಡದಂತೆ ವಿಧಿಸಿರುವ ನಿಷೇಧಾಜ್ಞೆಯನ್ನು ಮಾರ್ಚ್ 22ರವರೆಗೆ ವಿಸ್ತರಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
ಶಿವಮೊಗ್ಗ, ಉಡುಪಿ ಸೇರಿದಂತೆ ರಾಜ್ಯಾದ್ಯಂತ ಕೆಲ ಶಾಲಾ-ಕಾಲೇಜುಗಳಲ್ಲಿ ಹಿಜಾಬ್-ಕೇಸರಿ ವಿಚಾರವು ಸಂಘರ್ಷಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೆ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಫೆಬ್ರವರಿ 9ರಂದು ಪೊಲೀಸ್ ಆಯುಕ್ತರು 144 ಸೆಕ್ಷನ್ ಜಾರಿಗೊಳಿಸಿ ಆದೇಶ ಹೊರಡಿಸಿದ್ದರು.