ಬೆಂಗಳೂರು : ಪ್ರತಿವರ್ಷದಂತೆ ಈ ವರ್ಷವೂ 14ನೇ ಬೆಂಗಳೂರು ಅಂತಾರಾಷ್ಟ್ರಿಯ ಚಲನಚಿತ್ರೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದೆ. ಈ ನಿಟ್ಟಿನಲ್ಲಿ ಈ ವರ್ಷದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ತಯಾರಿ ಬಗ್ಗೆ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಅಶೋಕ್ ಕಶ್ಯಪ್ ಸಾಕಷ್ಟು ಮಾಹಿತಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ :ಆಸ್ಕರ್ ಗೆದ್ದ ನಾಟು ನಾಟು: ಗೀತೆ ರಚನೆಕಾರ ಚಂದ್ರಬೋಸ್ ಎಕ್ಸ್ಕ್ಲೂಸಿವ್ ಸಂದರ್ಶನ ಇಲ್ಲಿದೆ
ರಾಜ್ಯಪಾಲರದ ಶ್ರೀ ಥಾವರ್ ಚಂದ್ ಅಧ್ಯಕ್ಷತೆ :ಮಾರ್ಚ್ 23ರಂದು ಸಂಜೆ ವಿಧಾನಸೌಧದ ಮುಂಭಾಗದಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ ಮಾಡಲಾಗುತ್ತೆ ಎಂಬುದು ತಿಳಿದುಬಂದಿದೆ. ಅಲ್ಲದೇ, ಈ ಚಲನಚಿತ್ರೋತ್ಸವವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಉದ್ಘಾಟನೆ ಮಾಡುತ್ತಾರೆ. ಈ ಸಮಯದಲ್ಲಿ ರಾಜ್ಯಪಾಲರದ ಶ್ರೀ ಥಾವರ್ ಚಂದ್ ಅಧ್ಯಕ್ಷತೆ ವಹಿಸುತ್ತಾರೆ. ಅಂದು ಏಷ್ಯನ್ ಹಾಗೂ ಭಾರತೀಯ ಹಾಗು ಕನ್ನಡ ಚಲನಚಿತ್ರಗಳ ಸ್ಪರ್ಧಾ ವಿಭಾಗದಲ್ಲಿ ವಿಜೇತರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂಬುದು ತಿಳಿದುಬಂದಿದೆ.
ಇದನ್ನೂ ಓದಿ :ಅಧಿಕಾರಕ್ಕಾಗಿ ಅಲ್ಲ, ಜನಕಲ್ಯಾಣಕ್ಕಾಗಿ ರಾಜಕಾರಣ ಮಾಡುವೆ: ಸಿಎಂ ಬೊಮ್ಮಾಯಿ
ಕನ್ನಡ ಚಿತ್ರರಂಗದ ಗಣ್ಯರು ಸಹ ಉಪಸ್ಥಿತರಿರುತ್ತಾರೆ: ಇನ್ನು 14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಬಾಲಿವುಡ್ನ ಎವರ್ ಗ್ರೀನ್ ನಟಿ ರೇಖಾ ಮುಖ್ಯ ಅತಿಥಿಯಾಗಿ ಬರಲಿದ್ದಾರೆ ಎನ್ನಲಾಗಿದೆ. ಅಂದು ಕನ್ನಡ ಚಿತ್ರರಂಗದ ಗಣ್ಯರು ಸಹ ಉಪಸ್ಥಿತರಿರುತ್ತಾರೆ. 23 ರಿಂದ 30 ರವೆರೆಗೂ ಒಂದು ವಾರಗಳ ಕಾಲ ಈ ಚಲನಚಿತ್ರೋತ್ಸವ ನಡೆಯಲಿದೆ.