ಕರ್ನಾಟಕ

karnataka

ETV Bharat / state

ಚಿರತೆ ದಾಳಿಗೆ ಮೃತಪಟ್ಟವರ ಕುಟುಂಬದವರಿಗೆ 15 ಲಕ್ಷ ಪರಿಹಾರ: ಸಿಎಂ ಬೊಮ್ಮಾಯಿ - ಚಿರತೆ ದಾಳಿಯಲ್ಲಿ ಮೃತಪಟ್ಟವರ ಕುಟುಂಬಕ್ಕೂ ಪರಿಹಾರ

ಚಿರತೆ ದಾಳಿಗೆ ಮೃತಪಟ್ಟವರ ಕುಟುಂಬದವರಿಗೆ 15 ಲಕ್ಷ ಪರಿಹಾರ ನೀಡುವುದಾಗಿ ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.

deceased in the leopard attack  15 lakh compensation to the family  Leopard killed to woman  Leopard killed to young woman in Mysore  ಚಿರತೆ ದಾಳಿಗೆ ಮೃತ  ಚಿರತೆ ದಾಳಿಗೆ ಮೃತಪಟ್ಟವರ ಕುಟುಂಬದವರಿಗೆ 15 ಲಕ್ಷ ಪರಿಹಾರ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಚಿರತೆ ದಾಳಿಯಲ್ಲಿ ಮೃತಪಟ್ಟವರ ಕುಟುಂಬಕ್ಕೂ ಪರಿಹಾರ  ಕಾಡುಪಕ್ಕದಲ್ಲಿ ಇಂತಹ ಘಟನೆ
ಸಿಎಂ ಬೊಮ್ಮಾಯಿ

By

Published : Dec 3, 2022, 11:03 AM IST

ಬೆಂಗಳೂರು:ಚಿರತೆ ದಾಳಿಯಿಂದ ಮೃತಪಟ್ಟ ಕುಟುಂಬದವರಿಗೆ 15 ಲಕ್ಷಗಳ ಪರಿಹಾರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆನೆ ದಾಳಿಯಿಂದ ಮೃತಪಟ್ಟ ಕುಟುಂಬದವರಿಗೆ ನೀಡಿದಂತೆ ಚಿರತೆ ದಾಳಿಯಲ್ಲಿ ಮೃತಪಟ್ಟವರ ಕುಟುಂಬಕ್ಕೂ ಪರಿಹಾರ ಒದಗಿಸಲಾಗುವುದು. ಮೊದಲು ಕಾಡುಪಕ್ಕದಲ್ಲಿ ಇಂತಹ ಘಟನೆಗಳು ಆಗುತ್ತಿದ್ದವು. ಈಗ ಬೆಂಗಳೂರಿನ ಆಸುಪಾಸಿನಲ್ಲಿ ಇಂತಹ ಘಟನೆಗಳು ಆಗುತ್ತಿರುವುದನ್ನು ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಕಳೆದ ಹಲವಾರು ದಿನಗಳಿಂದ ಚಿರತೆಯನ್ನು ಬೇಟೆಯಾಡಲು ಪ್ರಯತ್ನ ಮಾಡಲಾಗುತ್ತಿದ್ದು, ಅದಕ್ಕೆ ಬಲೆಯನ್ನೂ ಹಾಕಲಾಗಿದೆ. ಅದನ್ನು ಜೀವಂತವಾಗಿ ಹಿಡಿದು ಕಾಡಿಗೆ ಬಿಡಲು ಇಲಾಖೆಗೆ ಸೂಚನೆ ನೀಡಿರುವುದಾಗಿ ಹೇಳಿದರು.

ಸಿಎಂ ಬೊಮ್ಮಾಯಿ ಹೇಳಿಕೆ

ವಿಶೇಷ ತಂಡ ರಚನೆ: ಬೆಂಗಳೂರು ಹಾಗೂ ಮೈಸೂರು ವಲಯದಲ್ಲಿನ ಆನೆ ಕಾಡಿಡಾರ್ ಸುತ್ತಮುತ್ತ ಚಿರತೆಗಳೂ ಇವೆ. ಚಿರತೆ ದಾಳಿ ಆಗುತ್ತಿರುವುದನ್ನು ತಡೆಯಲು ವಿಶೇಷ ತಂಡವನ್ನು ರಚಿಸಲಾಗಿದ್ದು, ನಿರ್ದಿಷ್ಟವಾಗಿ ಕ್ರಮಕೈಗೊಳ್ಳಲು ತಿಳಿಸಲಾಗಿದೆ. ಅವುಗಳನ್ನು ನಿಯಂತ್ರಿಸಲು ಹಾಗೂ ಕಾಡು ಬಿಟ್ಟು ಆಚೆ ಬಂದಿರುವ ಚಿರತೆಗಳನ್ನು ಹಿಡಿಯಲು ತಂಡ ಕಾರ್ಯಾಚರಣೆ ಮಾಡಲಿದೆ ಎಂದರು.

ಓದಿ:ರಾಜ್ಯದಲ್ಲಿ ಚಿರತೆ ದಾಳಿ: ಅರಣ್ಯ ಇಲಾಖೆ ನಿರ್ಲಕ್ಷ್ಯಕ್ಕೆ ಹೆಚ್​ಡಿಕೆ ಕಿಡಿ

ABOUT THE AUTHOR

...view details