ಬೆಂಗಳೂರು:ನಗರದಲ್ಲಿರುವ ಹೆಚ್ ಬಿ ಆರ್ ಬಡಾವಣೆಯ 1ನೇ ಹಂತ, ಕಾಚರಕನಹಳ್ಳಿ ಗ್ರಾಮದ ಸರ್ವೆ ನಂ. 181, 182 ಮತ್ತು 183ರಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿದ ಜಾಗದಲ್ಲಿ ಅನಧಿಕೃತ ಕಟ್ಟಡಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಶನಿವಾರ ಬಿಗಿ ಪೊಲೀಸ್ ಭದ್ರತೆಯಲ್ಲಿ ತೆರವುಗೊಳಿಸಿದರು.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಸ್ತಿ ಎಂದು ಕರ್ನಾಟಕ ರಾಜ್ಯ ಸರ್ಕಾರ 1985ರಲ್ಲಿ ಅಂತಿಮ ಅಧಿಸೂಚನೆ ಹೊರಡಿಸಿತ್ತು. ಸುಮಾರು 150 ಕೋಟಿ ಬೆಲೆಬಾಳುವ 2.20 ಎಕರೆಯಲ್ಲಿ ನಿರ್ಮಿಸಿದ್ದ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಿ 200 ಅಧಿಕಾರಿಗಳು, 100 ಜನ ಕಾರ್ಮಿಕರು ಹಾಗೂ 15 ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ಸಮ್ಮುಖದಲ್ಲಿ ಜಾಗೆಯನ್ನು ಪ್ರಾಧಿಕಾರದ ಸುಪರ್ದಿಗೆ ತೆಗೆದುಕೊಳ್ಳಲಾಯಿತು.