ಬೆಂಗಳೂರು: ಪೂರ್ವ ತಾಲೂಕು ತಹಶೀಲ್ದಾರ್ ಕಚೇರಿಯಲ್ಲಿ ಏರ್ಪಡಿಸಿದ್ದ 150ನೇ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ತೇಜಸ್ ಕುಮಾರ್ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಬೆಂಗಳೂರು ಪೂರ್ವ ತಾಲೂಕಿನಲ್ಲಿ 150ನೇ ಗಾಂಧಿ ಜಯಂತಿ ಆಚರಣೆ - gandhi Jayanti News
ಪೂರ್ವ ತಾಲೂಕು ತಹಶಿಲ್ದಾರ್ ಕಚೇರಿಯಲ್ಲಿ ಏರ್ಪಡಿಸಿದ್ದ 150ನೇ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ತೇಜಸ್ ಕುಮಾರ್ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಗಾಂಧೀಜಿಯವರು ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದ ಧೀಮಂತ ನಾಯಕ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಇವರ ಪಾತ್ರ ಅಮೋಘವಾದದ್ದು. ಇವರು ಜನರ ಕಲ್ಯಾಣದ ಮುಖಾಂತರ ಸುಖೀ ರಾಜ್ಯದ ಕಲ್ಪನೆಯ ಕನಸನ್ನು ಕಂಡಿದ್ದು, ದೀನ ದಲಿತರ ಏಳಿಗೆಗಾಗಿ ಹಗಲಿರುಳು ಶ್ರಮಿಸಿದ್ದಾರೆ. ಅಲ್ಲದೇ ಅಹಿಂಸಾ ತತ್ವದ ಮೂಲಕ ದೇಶದ ಜನರಲ್ಲಿ ಶಾಂತಿಯನ್ನು ಬೆಳೆಸಿದ್ದಾರೆ. ಆದ್ದರಿಂದ ಗಾಂಧೀಜಿ ಅವರ ತತ್ವಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು .
ಸ್ವಚ್ಛತಾ ಆಂದೋಲನದಡಿ ಬೆಂಗಳೂರು ಪೂರ್ವ ತಾಲೂಕಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡುವ ಮೂಲಕ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಆಶಯವನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದು ತೇಜಸ್ ಕುಮಾರ್ ಹೇಳಿದರು .