ಬೆಂಗಳೂರು :ರಾಜ್ಯದಲ್ಲಿಂದು 1526 ಜನರಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 8,81,086ಕ್ಕೆ ಏರಿಕೆ ಆಗಿದೆ. ಕೊರೊನಾಗೆ 12 ಸೋಂಕಿತರು ಮೃತರಾಗಿದ್ದು, ಈ ಮೂಲಕ ಸಾವಿನ ಸಂಖ್ಯೆ 11,738ಕ್ಕೆ ಏರಿಕೆ ಆಗಿದೆ. 19 ಸೋಂಕಿತರು ಅನ್ಯ ಕಾರಣಕ್ಕೆ ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಸೋಂಕಿತರ ಪ್ರಮಾಣ 1.34ರಷ್ಟು% ಹಾಗೂ ಸಾವಿನ ಪ್ರಮಾಣ ಶೇ 0.78% ರಷ್ಟಿದೆ. ಕೊರೊನಾದಿಂದ 1451 ಸೋಂಕಿತರು ಗುಣಮುಖರಾಗಿದ್ದಾರೆ. ಈವರೆಗೆ 8,43,950 ಮಂದಿ ಡಿಸ್ಜಾರ್ಜ್ ಆಗಿದ್ದಾರೆ.
401 ಸೋಂಕಿತರು ತೀವ್ರ ನಿಗಾಘಟಕದಲ್ಲಿದ್ದು, ರಾಜ್ಯದಲ್ಲಿ ಸದ್ಯ 25,379 ಸಕ್ರಿಯ ಪ್ರಕರಣಗಳಿವೆ. ಕಳೆದ 7 ದಿನಗಳಲ್ಲಿ 32,472 ಜನರು ಹೋಂ ಕ್ವಾರಂಟೈನ್ನಲ್ಲಿದ್ದಾರೆ. ಪ್ರಾಥಮಿಕ ಸಂಪರ್ಕದಲ್ಲಿ 1,25,092, ದ್ವಿತೀಯ ಸಂಪರ್ಕದಲ್ಲಿ 1,39,727 ಜನರಿದ್ದಾರೆ.