ಬೆಂಗಳೂರು:ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿದೆ ಎನ್ನುವಾಗಲೇ, ರಾಜಧಾನಿಯಲ್ಲಿ ಇದೀಗ ಕಾಲೇಜುಗಳೇ ಸೋಂಕು ಹರಡುವ ತಾಣವಾಗುತ್ತಿವೆ. ನಿನ್ನೆಯಷ್ಟೇ ಕ್ರಿಶ್ಚಿಯನ್ ಕಾಲೇಜಿನಲ್ಲಿ 34 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಇದೀಗ ದಾಸರಹಳ್ಳಿ ವಲಯದ ಚಿಕ್ಕಬಾಣಾವರದಲ್ಲಿರುವ ಧನ್ವಂತರಿ ನರ್ಸಿಂಗ್ ಕಾಲೇಜಿನಲ್ಲಿ 16 ವಿದ್ಯಾರ್ಥಿಗಳಿಗೆ ಕೋವಿಡ್ ದೃಢಪಟ್ಟಿದೆ.
ಮೊದಲು ಒಬ್ಬ ವಿದ್ಯಾರ್ಥಿಗೆ ಸೋಂಕು ತಗುಲಿತ್ತು. ಬಳಿಕ ಆತನ ಪ್ರಾಥಮಿಕ ಸಂಪರ್ಕಿತರನ್ನು ಪರೀಕ್ಷೆ ಮಾಡಿದಾಗ, 11 ಮಂದಿಗೆ ವೈರಸ್ ತಗುಲಿರುವುದು ದೃಢಪಟ್ಟಿದೆ. ಬಳಿಕ ಕಾಲೇಜಿನ ಸುಮಾರು 42 ವಿದ್ಯಾರ್ಥಿಗಳನ್ನ ಟೆಸ್ಟ್ಗೆ ಒಳಪಡಿಸಿದಾಗ, ಅದರಲ್ಲಿ ಮತ್ತೆ ನಾಲ್ವರಿಗೆ ಪಾಸಿಟಿವ್ ಕಂಡುಬಂದಿದೆ. ಸದ್ಯ ಬಿಬಿಎಂಪಿಯು ಕಾಲೇಜಿನ ಹಾಸ್ಟೆಲ್ನ್ನು ಮೈಕ್ರೋ ಕಂಟೈನ್ಮೆಂಟ್ ಜೋನ್ ಆಗಿ ಮಾಡಲಾಗಿದೆ.