ಬೆಂಗಳೂರು:ರಾಜ್ಯದಲ್ಲಿಂದು 1,69,332 ಜನರಿಗೆ ಕೊರೊನಾ ತಪಾಸಣೆ ನಡೆಸಲಾಗಿದ್ದು, 1,669 ಮಂದಿಗೆ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಇಲ್ಲಿಯವರೆಗೆ ಒಟ್ಟಾರೆ 29,26,401 ಕೋವಿಡ್ ಪ್ರಕರಣಗಳು ದಾಖಲಾದಂತಾಗಿದೆ.
1,672 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೆ 28,66,739 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 22,703 ಸಕ್ರಿಯ ಪ್ರಕರಣಗಳಿವೆ. 22 ಸೋಂಕಿತರು ಮೃತರಾಗಿದ್ದು, ಸಾವಿನ ಸಂಖ್ಯೆ 36,933ಕ್ಕೆ ಏರಿದೆ. ಸಾವಿನ ಪ್ರಮಾಣ ಶೇ 1.31 ಹಾಗೂ ಪಾಸಿಟಿವಿಟಿ ದರ ಶೇ 0.98ರಷ್ಟಿದೆ.
ವಿಮಾನ ನಿಲ್ದಾಣದಿಂದ 758 ಜನರು ಆಗಮಿಸಿದ್ದು, ಕೊರೊನಾ ತಪಾಸಣೆಗೆ ಒಳಪಟ್ಟಿದ್ದಾರೆ. ಯುಕೆಯಿಂದ 352 ಪ್ರಯಾಣಿಕರು ಆಗಮಿಸಿದ್ದಾರೆ.
ರೂಪಾಂತರಿ ಮಾಹಿತಿ:
1) ಡೆಲ್ಟಾ ( Delta/B.617.2) - 1089